ETV Bharat / state

ಹೊಸ ವರ್ಷದಲ್ಲಿ ತಾಲ್ಲೂಕಿನ ಜನತೆಗೆ ಸಿಹಿ ಸುದ್ದಿ ಕೊಡುತ್ತೇನೆ: ಶರತ್ ಬಚ್ಚೇಗೌಡ - hosakote latest news

ಈ ಚುನಾವಣೆಯ ಫಲಿತಾಂಶ ಹೊಸಕೋಟೆ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ. 494 ಸದಸ್ಯರ ಪೈಕಿ 327 ಸದಸ್ಯರು ನನ್ನ ಬೆಂಬಲಿತರಾಗಿದ್ದು ಶೇ 70 ರಷ್ಟು ಮತದಾರರು ನನ್ನನ್ನು ಬೆಂಬಲಿಸಿದ್ದಾರೆ. ಇದರಿಂದ ತಾಲೂಕಿನಲ್ಲಿ ಜವಾಬ್ದಾರಿ ಹೆಚ್ಚಾಗಿದೆ. ಅಭಿವೃದ್ಧಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದ್ದಾರೆ.

sharath bachegowda reaction on party change
ಶರತ್ ಬಚ್ಚೇಗೌಡ
author img

By

Published : Jan 1, 2021, 9:34 PM IST

ಹೊಸಕೋಟೆ : ಕಾಂಗ್ರೆಸ್ ಸೇರುವ ಬಗ್ಗೆ ಪಕ್ಷದ ದೊಡ್ಡವರ ನಡುವೆ ಮಾತುಕತೆ ನಡೆಯುತ್ತಿದೆ. ಆದರೂ ಹೊಸ ವರ್ಷದಲ್ಲಿ ತಾಲೂಕಿನ ಜನರಿಗೆ ಸಿಹಿ ಸುದ್ದಿ ನೀಡುತ್ತೇನೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿಕೆ ನೀಡಿದ್ದಾರೆ.

ಶರತ್ ಬಚ್ಚೇಗೌಡ

ತಾಲೂಕಿನ ಸಮಗ್ರ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯತಿಗಳು ಕೂಡ ನಿರ್ಣಾಯಕ ಪಾತ್ರ ವಹಿಸಲಿದ್ದು ,ಚುನಾವಣೆ ಯಶಸ್ವಿಯಾಗಿ ಮುಗಿದಿದೆ. ಇನ್ನು ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಯಾವುದೇ ಮೀಸಲಾತಿ ಬಂದರೂ ಇಬ್ಬರಿಗೆ 2 ಅವಧಿಗೆ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ತಾಲೂಕಿನ 26 ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ 23 ಗ್ರಾಮ ಪಂಚಾಯಿತಿಗಳಲ್ಲಿ ನನ್ನ ಬೆಂಬಲಿತ ಅಭ್ಯರ್ಥಿಗಳು ವಿಜೇತರಾಗಿ ಸಂತಸ ತಂದಿದ್ದಾರೆ. ಈ ಚುನಾವಣೆಯ ಫಲಿತಾಂಶ ಹೊಸಕೋಟೆ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ. 494 ಸದಸ್ಯರ ಪೈಕಿ 327 ಸದಸ್ಯರು ನನ್ನ ಬೆಂಬಲಿತ ಸದಸ್ಯರಾಗಿದ್ದು, ಶೇ 70 ರಷ್ಟು ಮತದಾರರು ನನ್ನನ್ನು ಬೆಂಬಲಿಸಿದ್ದಾರೆ. ಇದರಿಂದ ತಾಲೂಕಿನಲ್ಲಿ ಜವಾಬ್ದಾರಿ ಹೆಚ್ಚಾಗಿದ್ದು, ಅಭಿವೃದ್ಧಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಮಾಡುವ ಗುರುತರ ಜವಾಬ್ದಾರಿ ಇದೆ. ಈ ನಿಟ್ಟಿನಲ್ಲಿ ಸಮನ್ವಯ ಸಮಿತಿ ರಚನೆ ಮಾಡುವ ಮೂಲಕ ಎಲ್ಲ ಸದಸ್ಯರನ್ನು ಸಾಮರಸ್ಯದಿಂದ ಕೊಂಡೊಯ್ಯುವುದಾಗಿ ತಿಳಿಸಿದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 1.80 ಲಕ್ಷ ಮತದಾರರು ಮತದಾನ ಮಾಡಿದ್ದಾರೆ. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಬಂದ ನಂತರ ಪಕ್ಷಬೇಧ ಮರೆತು ಆಯ್ಕೆ ಮಾಡುವ ಮೂಲಕ ಮತದಾರರ ವಿಶ್ವಾಸಕ್ಕೆ ಧಕ್ಕೆ ಬಾರದ ಹಾಗೆ ನಡೆದುಕೊಳ್ಳುವ ಕೆಲಸ ಮಾಡುತ್ತೇನೆ. ಎಲ್ಲಾ ಸದಸ್ಯರು ತಮ್ಮ ವಿರುದ್ಧ ಸೋತ ಅಭ್ಯರ್ಥಿಗಳ ಒಡನಾಟದಲ್ಲಿ ವಿರೋಧ ಕಟ್ಟಿಕೊಳ್ಳದೆ ಗ್ರಾಮಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಅಭಿವೃದ್ಧಿ ನಡೆಸಿ ಎಂದು ಹೇಳಿದರು.

ಹೊಸಕೋಟೆಯಲ್ಲಿ ಬಿಜೆಪಿ 26 ಪಂಚಾಯಿತಿಗಳ ಪೈಕಿ ಕೇವಲ 3 ಪಂಚಾಯಿತಿಗಳಲ್ಲಿ ಮಾತ್ರ ಗೆಲುವನ್ನು ಸಾಧಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.