ETV Bharat / state

ಕೊರೊನಾ ಉಪಕರಣ ಖರೀದಿಯಲ್ಲಿ ಅಕ್ರಮ ನಡೆದಿಲ್ಲವೆಂದರೆ ಅಂಜಿಕೆ ಯಾಕೆ!? ತನಿಖೆ ನಡೆಸುವಂತೆ ಸಿದ್ದು ಟ್ವೀಟ್​ - ಸಿದ್ದರಾಮಯ್ಯ ಟ್ವಿಟ್​

ರಾಜ್ಯದಲ್ಲಿ ಕೊರೊನಾ ಉಪಕರಣ ಖರೀದಿ ವಿಚಾರವಾಗಿ ಆಡಳಿತ-ಪ್ರತಿಪಕ್ಷದ ನಡುವೆ ಕೆಸರೆರಚಾಟ ಶುರುವಾಗಿದ್ದು, ಇದೀಗ ಸಿದ್ದರಾಮಯ್ಯ ಮತ್ತೊಮ್ಮೆ ಇದೇ ವಿಷಯವಾಗಿ ಟ್ವೀಟ್​ ಮಾಡಿದ್ದಾರೆ.

Siddaramaiah tweet
Siddaramaiah tweet
author img

By

Published : Jul 23, 2020, 10:53 PM IST

ಬೆಂಗಳೂರು: ಕೋವಿಡ್​-19 ಉಪಕರಣ ಖರೀದಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂದು ಆರೋಪ ಮಾಡಿದ್ದ ಕಾಂಗ್ರೆಸ್​ಗೆ ಸುದ್ದಿಗೋಷ್ಠಿ ನಡೆಸುವ ಮೂಲಕ ಆಡಳಿತ ಪಕ್ಷದ ಸಚಿವರು ತಿರುಗೇಟು ನೀಡಿದ್ದರು. ಆದರೆ ಇದೀಗ ಸಿದ್ದರಾಮಯ್ಯ ಟ್ವೀಟರ್​​ನಲ್ಲಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ಉಪಕರಣ ಖರೀದಿಯಲ್ಲಿ ಯಾವುದೇ ರೀತಿಯ ಅವ್ಯವಹಾರವಾಗಿಲ್ಲ ಎಂದು ಬಿಜೆಪಿ ಸ್ಪಷ್ಟೀಕರಣ ನೀಡಿದ್ದು, ಇದೇ ವಿಷಯವನ್ನಿಟ್ಟುಕೊಂಡು ಸಿದ್ದರಾಮಯ್ಯ ಟ್ವೀಟ್​ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

  • ಕೊರೊನಾ‌ ಉಪಕರಣಗಳ‌ ಖರೀದಿಯಲ್ಲಿ ಅಕ್ರಮ ನಡೆದಿಲ್ಲ‌‌ ಎನ್ನುವ ವಿಶ್ವಾಸ ನಿಮಗಿದ್ದರೆ ಅಂಜಿಕೆ ಯಾಕೆ? ಆರೋಪಗಳ ತನಿಖೆಯನ್ನು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ಮಾಡಿಸಿ. ನಮ್ಮ ದಾಖಲೆಗಳನ್ನು ಅಲ್ಲಿಯೇ ನೀಡುತ್ತೇವೆ.@CMofKarnataka @drashwathcn @mla_sudhakar @BSBommai@sriramulubjp @RAshokaBJP

    — Siddaramaiah (@siddaramaiah) July 23, 2020 " class="align-text-top noRightClick twitterSection" data=" ">

ಕೊರೊನಾ‌ ಉಪಕರಣಗಳ‌ ಖರೀದಿಯಲ್ಲಿ ಅಕ್ರಮ ನಡೆದಿಲ್ಲ ಎನ್ನುವ ವಿಶ್ವಾಸ ನಿಮಗಿದ್ದರೆ ಅಂಜಿಕೆ ಯಾಕೆ? ಆರೋಪಗಳ ತನಿಖೆಯನ್ನು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ಮಾಡಿಸಿ. ನಮ್ಮ ದಾಖಲೆಗಳನ್ನು ಅಲ್ಲಿಯೇ ನೀಡುತ್ತೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉಪ ಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್​​, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಡಾ.ಕೆ. ಸುಧಾಕರ್, ಆರೋಗ್ಯ ಸಚಿವ ಬಿ. ಶ್ರೀರಾಮುಲು ಹಾಗೂ ಆರ್​​.ಅಶೋಕ್ ಅವರಿಗೆ ಸವಾಲು ಹಾಕಿದ್ದಾರೆ.

  • '೨೦೧೯ರ ವೆಂಟಿಲೇಟರ್ ಖರೀದಿಯಲ್ಲಿಯೂ ಅಕ್ರಮವಾಗಿದೆ,
    ಅದೇನು ಚಂದ್ರಲೋಕದಿಂದ ಬಂದಿತ್ತಾ? ಎಂದು ಕೇಳಿದ್ದಿರಲ್ಲಾ @RAshokaBJP ಅವರೇ,

    ಆಗ ಅಕ್ರಮವಾಗಿದ್ದರೆ ವಿರೋಧ ಪಕ್ಷದಲ್ಲಿದ್ದ ನೀವ್ಯಾಕೆ ಆಗಲೇ
    ಪ್ರಶ್ನಿಸಿರಲಿಲ್ಲ.

    ಆ ಕಾಲದಲ್ಲಿ ನೀವು ಮಂಗಳ ಗ್ರಹದಲ್ಲಿ ಇದ್ರಾ?@CMofKarnataka #LekkaKodi #Covid_19

2019ರ ವೆಂಟಿಲೇಟರ್ ಖರೀದಿಯಲ್ಲಿಯೂ ಅಕ್ರಮವಾಗಿದೆ. ಅದೇನು ಚಂದ್ರಲೋಕದಿಂದ ಬಂದಿತ್ತಾ? ಎಂದು ಕೇಳಿದ್ದಿರಲ್ಲಾ ಸಚಿವ ಆರ್. ಅಶೋಕ್ ಅವರೇ, ಆಗ ಅಕ್ರಮವಾಗಿದ್ದರೆ ವಿರೋಧ ಪಕ್ಷದಲ್ಲಿದ್ದ ನೀವ್ಯಾಕೆ ಆಗಲೇ ಪ್ರಶ್ನಿಸಿರಲಿಲ್ಲ. ಆ ಕಾಲದಲ್ಲಿ ನೀವು ಮಂಗಳ ಗ್ರಹದಲ್ಲಿ ಇದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.