ETV Bharat / state

ನಾಳೆ ದೇವನಹಳ್ಳಿಯ ತಾಜ್ ಎಕ್ಸೋಟಿಕ ರೆಸಾರ್ಟ್​ನಲ್ಲಿ ಕಾಂಗ್ರೆಸ್ ಮುಖಂಡರ ಮಹತ್ವದ ಸಭೆ!! - Significant meeting of congress leaders at Taj Exotica Resort at Devanahalli

ರಾಜ್ಯ ಕೈ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಭಾಗಿಯಾಗಲಿದ್ದಾರೆ. ಇತ್ತೀಚಿಗಷ್ಟೇ ಅಧಿಕಾರ ಸ್ವೀಕರಿಸಿರುವ ಸುರ್ಜೇವಾಲಾ ಮುಂದಿನ ವಿಧಾನಸಭೆ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಕಾಲಾವಧಿ ಇರುವ ಸಂದರ್ಭದಲ್ಲಿ ಪಕ್ಷದಲ್ಲಿರುವ ಸಣ್ಣಪುಟ್ಟ ಆಂತರಿಕ ಭಿನ್ನಾಭಿಪ್ರಾಯ ಸರಿಪಡಿಸುವ ಪ್ರಯತ್ನ ನಡೆಸಲಿದ್ದಾರೆ..

Significant meeting of Congress leaders at Taj Exotica Resort
ದೇವನಹಳ್ಳಿಯ ತಾಜ್ ಎಕ್ಸೋಟಿಕ ರೆಸಾರ್ಟ್
author img

By

Published : Nov 29, 2020, 10:18 PM IST

ದೇವನಹಳ್ಳಿ : ರಾಜ್ಯ ಕಾಂಗ್ರೆಸ್ ನಾಯಕರ ನಡುವೆ ಸಾಮರಸ್ಯ ಮೂಡಿಸಲು ದೇವನಹಳ್ಳಿಯ ತಾಜ್ ಎಕ್ಸೋಟಿಕ ರೆಸಾರ್ಟ್​ನಲ್ಲಿ ನಾಳೆ ಸಭೆ ನಡೆಯಲಿದೆ. ಇಂದು ಹೊಟೇಲ್‌ಗೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ನಾಳೆ ಬೆಂಗಳೂರು ಹೊರವಲಯದ ದೇವನಹಳ್ಳಿಯ ತಾಜ್ ಎಕ್ಸೋಟಿಕ ರೆಸಾರ್ಟ್​ನಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಯಲಿದೆ. ಎಐಸಿಸಿ ಪ್ರತಿನಿಧಿಯಾಗಿ ಮಹಾರಾಷ್ಟ್ರ ಮಹಾಘಟಬಂಧನ್ ಸರ್ಕಾರದ ಹಿರಿಯ ಸಚಿವೆ ಯಶೋಮತಿ ಠಾಕೂರ್ ಭಾಗಿಯಾಗಲಿದ್ದಾರೆ.

ಪಕ್ಷ ಸಂಘಟನೆ, ಮೂರು ಉಪಚುನಾವಣೆ ಸಿದ್ಧತೆ, ಶಿರಾ, ಆರ್.ಆರ್.ನಗರ ಸೋಲಿನ ಆತ್ಮಾವಲೋಕನ, ಪಕ್ಷದೊಳಗಿನ ಆಂತರಿಕ ಅಸಮಾಧಾನಗಳ ಬಗ್ಗೆ ಚರ್ಚೆ ನಡೆಯಲಿದೆ. ಪರಸ್ಪರ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಬಗ್ಗೆ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಮಹತ್ವದ ಸಭೆ ಹಮ್ಮಿಕೊಳ್ಳಲಾಗಿದೆ. ಅಂದಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಿರುವ ನಾಯಕರು ಈ ನಿಟ್ಟಿನಲ್ಲಿ ಹಿರಿಯರ ಮಾರ್ಗದರ್ಶನ ಆಲಿಸಲಿದ್ದಾರೆ.

ರಾಜ್ಯ ಕೈ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಭಾಗಿಯಾಗಲಿದ್ದಾರೆ. ಇತ್ತೀಚಿಗಷ್ಟೇ ಅಧಿಕಾರ ಸ್ವೀಕರಿಸಿರುವ ಸುರ್ಜೇವಾಲಾ ಮುಂದಿನ ವಿಧಾನಸಭೆ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಕಾಲಾವಧಿ ಇರುವ ಸಂದರ್ಭದಲ್ಲಿ ಪಕ್ಷದಲ್ಲಿರುವ ಸಣ್ಣಪುಟ್ಟ ಆಂತರಿಕ ಭಿನ್ನಾಭಿಪ್ರಾಯ ಸರಿಪಡಿಸುವ ಪ್ರಯತ್ನ ನಡೆಸಲಿದ್ದಾರೆ.

ಅತ್ಯಂತ ಪ್ರಮುಖವಾಗಿ ಮೂಲ ಹಾಗೂ ವಲಸೆ ಕಾಂಗ್ರೆಸ್ಸಿಗರ ಭಿನ್ನಾಭಿಪ್ರಾಯ ಈಗಲೂ ಕಾಂಗ್ರೆಸ್ ಪಕ್ಷದಲ್ಲಿ ಇದೆ. ಪಕ್ಷದ ಇಬ್ಬರು ಹಿರಿಯ ನಾಯಕರಾದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಮೊದಲಿನಿಂದಲೂ ಸಾಮರಸ್ಯ ಇಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಒಂದು ಉಭಯ ನಾಯಕರ ನಡುವೆ ಮಾತುಕತೆ ನಡೆಸಿ ಇರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸುವ ಪ್ರಯತ್ನ ನಡೆಯಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.