ಬೆಂಗಳೂರು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.
ಸಿಐಡಿಯಿಂದ ವರ್ಗಾವಣೆಗೊಂಡು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ರವಿ ಡಿ ಚನ್ನಣ್ಣನವರ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಜನರು ಭವ್ಯ ಸ್ವಾಗತ ಕೋರಿದ್ದಾರೆ.
ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಯಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸಿರುವ ಚನ್ನಣ್ಣನವರ್ ಕಾರ್ಯವೈಖರಿ ನೋಡಿರುವ ಜನ ಅವರ ಆಗಮನಕ್ಕೆ ಕಾತರರಾಗಿದ್ದಾರೆ.