ದೊಡ್ಡಬಳ್ಳಾಪುರ : ರಾಜ್ಯದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ, ಫೆಬ್ರವರಿ ತಿಂಗಳ ಹುಂಡಿ ಹಣ ಎಣಿಕೆ ಮಾಡಲಾಗಿದ್ದು, ಬರೋಬ್ಬರಿ 56,64,318 ರೂ. ಸಂಗ್ರಹವಾಗಿದೆ.
ಸೋಮವಾರ ಭಕ್ತರು ಕಾಣಿಕೆಯಾಗಿ ನೀಡಿದ ಹುಂಡಿ ಹಣವನ್ನು ಎಣಿಕೆ ಮಾಡಲಾಗಿದ್ದು, ಈ ಹುಂಡಿ ಹಣ ಎಣಿಕೆಯಲ್ಲಿ ಭಕ್ತರು ಸಹ ಪಾಲ್ಗೊಂಡಿದ್ದರು. ಫೆಬ್ರವರಿ ತಿಂಗಳಲ್ಲಿ ಒಟ್ಟು 56,64,318 ರೂಪಾಯಿ ಕಾಣಿಕೆ ಹಣ ಸಂಗ್ರಹವಾಗಿದೆ. ಇದರ ಜೊತೆಗೆ 13,600 ರೂಪಾಯಿ ಮೌಲ್ಯದ 3 ಗ್ರಾಂ. ಚಿನ್ನ, 77,500 ರೂಪಾಯಿ ಮೌಲ್ಯದ 2 ಕೆ.ಜಿ. 50 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ನೀಡಿದ್ದಾರೆ.
ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಡಿ.ನಾಗರಾಜ್, ಮುಜರಾಯಿ ಇಲಾಖೆ ಸಹಾಯಕ ಆಯುಕ್ತೆ ಹೇಮಾವತಿ, ದೇವಸ್ಥಾನದ ಪ್ರಧಾನ ಆರ್ಚಕ ಸುಬ್ರಹ್ಮಣ್ಯಸ್ವಾಮಿ ಸಮ್ಮುಖದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು.