ದೇವನಹಳ್ಳಿ: ಯುಎಸ್ಎ ಪ್ರವಾಸದಿಂದ ಹಿಂದುರುಗಿದ ಬೆಂಗಳೂರಿನ ನಿವಾಸಿಗೆ ಕೊರೊನಾ ವೈರಸ್ ತಗಲಿರುವುದು ರಕ್ತ ಪರೀಕ್ಷೆಯಿಂದ ದೃಢಪಟ್ಟ ಹಿನ್ನೆಲೆ ಆರೋಗ್ಯ ಸಚಿವ ಶ್ರೀರಾಮುಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜ್ಯದಲ್ಲಿ ಮೊದಲ ವೈರಸ್ ಸೊಂಕು ಪತ್ತೆಯಾದ ಹಿನ್ನೆಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ಏಕಾಏಕಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊರೋನಾ ವೈರಸ್ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿರುವ ವೈದ್ಯರ ಕಾರ್ಯ ವೈಖರಿ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.