ನೆಲಮಂಗಲ: ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಥಾಮಸ್ ಮೆಮೋರಿಯಲ್ ಶಾಲೆಯಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಪ್ರಶ್ನೆ ಪತ್ರಿಕಾ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಇದೇ ವೇಳೆ 'ರಾಷ್ಟ್ರೀಯ ಪ್ರಶಸ್ತಿ' ಪಡೆದ ಶಿಕ್ಷಕ ಎಲೇಕ್ಯಾತನಹಳ್ಳಿ ಶಾಲೆಯ ಶಶಿಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಾಗಾರದ ನೇತೃತ್ವವಹಿಸಿದ್ದ ಗ್ರಾಮಾಂತರ ಜಿಲ್ಲಾ ಡಿಡಿಪಿಐ ಕೃಷ್ಣಮೂರ್ತಿ ಮಾತನಾಡಿ, ಪ್ರೌಢಶಾಲಾ ಶಿಕ್ಷಕರ ಕಾರ್ಯಾಗಾರದಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳ ಮುಖ್ಯಶಿಕ್ಷಕರು ಮತ್ತು ವಿಷಯವಾರು ಮುಖ್ಯಸ್ಥರು ತರಬೇತಿ ಪಡೆದ ಪರಿಣಾಮ ಈ ಬಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ 3ನೇ ಸ್ಥಾನದ ಪಟ್ಟಕ್ಕೇರಿತ್ತು. ಈಗ ಅದನ್ನು ಮುಂಬರುವ ಎಸ್ಸೆಸ್ಸೆಲ್ಸಿ ಚುನಾವಣೆ ಫಲಿತಾಂಶದಲ್ಲಿ ಮೂರನೇ ಸ್ಥಾನದಿಂದ 2ನೇ ಸ್ಥಾನಕ್ಕೇರಲು ಮತ್ತಷ್ಟು ಶ್ರಮವಹಿಸಬೇಕಾಗಿದೆ ಎಂದು ಶಿಕ್ಷಕರಿಗೆ ಸಲಹೆ ನೀಡಿದ್ದಾರೆ.
ಜಿಲ್ಲೆ ರಾಜ್ಯಕ್ಕೆ 3ನೇ ಸ್ಥಾನದ ಪಟ್ಟ ಅಲಂಕರಿಸಲು ಜಿಲ್ಲಾ ಪಂಚಾಯತ್ ಸಿಇಒ ಲತಾ ಅವರೇ ಕಾರಣರಾಗಿದ್ದರು. ವರ್ಗಾವಣೆಯಾದರೂ ಅವರು ಹಾಕಿಕೊಟ್ಟ ಮಾಗದರ್ಶನದಲ್ಲೇ ಈ ಬಾರಿಯೂ ಉತ್ತಮ ಫಲಿತಾಂಶ ಪಡೆಯುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದು ಶಿಕ್ಷಕರಿಗೆ ಸೂಚಿಸಿದ್ದಾರೆ. ಜಿಪಂ ಸಿಇಒ ಲತಾ ಅವರು ಬುಧವಾರ ಚಿಕ್ಕಬಳ್ಳಾಪುರ ಜಿಲ್ಲೆಗೆ ಡಿಸಿಯಾಗಿ ವರ್ಗಾವಣೆಯಾದರು.