ನೆಲಮಂಗಲ (ಬೆ.ಗ್ರಾಮಾಂತರ): ಶಾಲಾ-ಕಾಲೇಜುಗಳಿಗೆ ರಜೆಯಿದ್ದ ಹಿನ್ನೆಲೆ, ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ಕೆಸರಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಹತ್ತುಕುಂಟೆಪಾಳ್ಯ ಕಾಲೋನಿಯ ಪುರುಷೋತ್ತಮ ಬಿನ್ ನಾಗರಾಜು (14 ) ಹಾಗೂ ನಾಗೇಶ ಬಿನ್ ನರೇಶ್ (17), ಮೃತ ವಿದ್ಯಾರ್ಥಿಗಳಾಗಿದ್ದಾರೆ.
ಇನ್ನು ಪುರುಷೋತ್ತಮ 10ನೇ ತರಗತಿ ಹಾಗೂ ನಾಗೇಶ್ ಐಟಿಐ ವ್ಯಾಸಂಗ ಮಾಡುತ್ತಿರುವುದಾಗಿ ತಿಳಿದುಬಂದಿದೆ. ಶಾಲಾ-ಕಾಲೇಜುಗಳಿಗೆ ರಜೆಯಿದ್ದ ಕಾರಣ ಇಬ್ಬರು ಕೆರೆಯಲ್ಲಿ ಈಜಲು ಹೋಗಿದ್ದಾರೆ. ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು, ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.