ದೇವನಹಳ್ಳಿ: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಪ್ರತಿ ಭಾನುವಾರ ಕರ್ಫ್ಯೂ ಜಾರಿ ಆದೇಶ ಹೊರಡಿಸಿದೆ. ಆದರೆ ವಿಮಾನ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗಳು, ಟ್ಯಾಕ್ಸಿ, ಕ್ಯಾಬ್ಗಳು ಬೆಳಗ್ಗೆಯಿಂದಲೇ ಸಂಚರಿಸುತ್ತಿರುವುದು ಕಾಣಿಸಿತು.
ಏರ್ ಟಿಕೆಟ್ ಇದ್ದ ಪ್ರಯಾಣಿಕರನ್ನು ಕರೆದುಕೊಂಡು ಹೋಗಲು ಟ್ಯಾಕ್ಸಿ ಚಾಲಕರಿಗೆ ಅವಕಾಶ ನೀಡಲಾಗಿದ್ದು, ಕರ್ಫ್ಯೂ ಇರುವ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಗೆ ತೆರಳುವ ಪ್ರಯಾಣಿಕರು ರಾತ್ರಿಯೇ ಏರ್‌ಪೋರ್ಟ್ ತಲುಪಿದ್ದಾರೆ. ಬೆಂಗಳೂರಿನ ವಿವಿಧ ಭಾಗಗಳಿಗೆ ಸಂಪರ್ಕಿಸುವ ಬಿಎಂಟಿಸಿಯ ವಾಯು ವಜ್ರ ಬಸ್‌ಗಳು ಸಂಚರಿಸುತ್ತಿದ್ದು, ಮಧ್ಯಾಹ್ನದ ನಂತರ ಬಸ್ಗಳನ್ನು ಸ್ಥಗಿತಗೊಳಿಸುವ ಸಾಧ್ಯತೆಯಿದೆ.