ETV Bharat / state

ಪ್ರಧಾನಿ ಜೊತೆಗಿನ ಸಂವಾದಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರ ಅಭಿನಂದನೆ - ಅನುಷಾಳೊಂದಿಗೆ ದೂರವಾಣಿಯಲ್ಲಿ ಸಂವಾದ

ಹೊಸಕೋಟೆ ತಾಲೂಕಿನ ತಾವರಕೆರೆ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿ ಮನೋಜ್​ಗೆ ಅಭಿನಂದಿಸಿದ ಸಚಿವರು, ಪ್ರಧಾನಿಯವರೊಂದಿಗೆ ಆತ್ಮವಿಶ್ವಾಸದಿಂದ ಮಾತನಾಡಬೇಕೆಂದು ಸಲಹೆ ನೀಡಿದರು.

ಶಿಕ್ಷಣ ಸಚಿವರು
ಶಿಕ್ಷಣ ಸಚಿವರು
author img

By

Published : Mar 19, 2021, 9:08 PM IST

ಹೊಸಕೋಟೆ: ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜತೆ ನಡೆಯುವ ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಆಯ್ಕೆಯಾಗಿರುವ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯೊಂದಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾತನಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಹೊಸಕೋಟೆ ತಾಲೂಕಿನ ತಾವರಕೆರೆ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿ ಮನೋಜ್​ಗೆ ಅಭಿನಂದಿಸಿದ ಸಚಿವರು, ಪ್ರಧಾನಿಯವರೊಂದಿಗೆ ಆತ್ಮವಿಶ್ವಾಸದಿಂದ ಮಾತನಾಡಬೇಕೆಂದು ಸಲಹೆ ನೀಡಿದರು.

ಎಲ್ಲ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ಪರೀಕ್ಷೆ, ಶಾಲೆ, ತರಗತಿ, ಪಠ್ಯ, ಆರೋಗ್ಯ ರಕ್ಷಣೆ, ಸಾಂಕ್ರಾಮಿಕ ರೋಗಗಳಿಂದ ದೂರ ಇರುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.

ವಿದ್ಯಾರ್ಥಿಗಳನ್ನು ಅಭಿನಂದಿಸಿದ ಶಿಕ್ಷಣ ಸಚಿವರು

ರಾಜ್ಯದ ಇಬ್ಬರು ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರಧಾನಿ ಜೊತೆ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಲು ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರವಾಗಿದೆ. ಉಡುಪಿ ವಿದ್ಯಾರ್ಥಿನಿಯ ತಂದೆ ಗಾರೆ ಕೆಲಸಗಾರರಾಗಿದ್ದರೆ, ಮನೋಜ್ ತಂದೆ ಹೂ ವ್ಯಾಪಾರಿಯಾಗಿದ್ದಾರೆ. ಈ ಇಬ್ಬರೂ ಬಡತನದ ಹಿನ್ನೆಲೆಯವರು, ಪ್ರತಿಭೆ ಎಲ್ಲಿದ್ದರೂ ಅರಳುತ್ತದೆ ಎಂಬುದಕ್ಕೆ ಈ ಮಕ್ಕಳೇ ಸಾಕ್ಷಿಯಾಗಿದ್ದಾರೆ. ನಮ್ಮ ರಾಜ್ಯಕ್ಕೆ ಅಭಿಮಾನ ಮೂಡುವಂತೆ ಮಾಡಿದ್ದಾರೆ ಎಂದು ಸುರೇಶ್ ಕುಮಾರ್ ಹೇಳಿದರು.

ಅನುಷಾಗೆ ಸಚಿವರ ಕರೆ

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಚಾರಮಕ್ಕಿ ನಾರಾಯಣಶೆಟ್ಟಿ ಸ್ಮಾರಕ ಆರ್​ಡಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಅನುಷಾ ಕೃಷ್ಣ ಕುಲಾಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಸಚಿವ ಸುರೇಶ್ ಕುಮಾರ್, ಪ್ರಧಾನಿಯೊಂದಿಗೆ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಿಲು ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

'ಕೊರೊನಾ ಎರಡನೇ ಅಲೆಗೆ ಶಾಲೆ ಮುಚ್ಚುವ ಅಗತ್ಯವಿಲ್ಲ'

ರಾಜ್ಯದಲ್ಲಿ ಸೋಂಕು ಹೆಚ್ಚಾಗಿದ್ದು, ಕೊರೊನಾ 2ನೇ ಅಲೆ ಕುರಿತಾದ ಆತಂಕ ಶುರುವಾಗಿದೆ. ಈ ಭೀತಿ ಹಿನ್ನೆಲೆ ಶಾಲೆಗಳನ್ನು ಮುಚ್ಚುವ ಅಗತ್ಯವಿಲ್ಲ ಎಂದರು.

ಕೊರೊನಾ ಪ್ರಕರಣಗಳನ್ನು ನಾವು ಜಾಸ್ತಿ ಮಾಡುತ್ತಿದ್ದೇವೆ. ಸರ್ಕಾರದ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಆದರೆ, ಶಾಲೆಗಳಲ್ಲಿ ಮಕ್ಕಳು ನಡೆದುಕೊಳ್ಳುತ್ತಿರುವ ರೀತಿ ಮಾದರಿಯಾಗಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.