ದೊಡ್ಡಬಳ್ಳಾಪುರ: ನಗರದ ನಾಗರಕೆರೆ ಏರಿಯಾ ಬಳಿಯ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ.
ಸುಮಾರು 30 ವರ್ಷದ ಅಪರಿಚಿತ ಪುರುಷನ ಶವವಾಗಿದ್ದು, ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿರಬಹುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಸಂಬಂಧಪಟ್ಟವರ ಪತ್ತೆಗಾಗಿ ದೊಡ್ಡಬಳ್ಳಾಪುರ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಆದರೆ ವಾರಸುದಾರರು ಪತ್ತೆಯಾಗದ ಕಾರಣ ಶವವನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.