ETV Bharat / state

ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಾಗೊಂಡಿದ್ದ ಬಾಲಕ ಸಾವು - attacked honeybees

ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಬಾಲಕರ ಮೇಲೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಭರತ್ ಎಂಬ ಬಾಲಕ ಮೃತಪಟ್ಟಿರುವ ಘಟನೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ.

ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಾಗೊಂಡಿದ್ದ ಬಾಲಕ ಸಾವು

author img

By

Published : Jan 4, 2021, 9:57 PM IST

Updated : Jan 4, 2021, 10:38 PM IST

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕಾಲೇಜು​ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಬಾಲಕರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ದಾಳಿಯಲ್ಲಿ ಗಂಭೀರವಾಗಿ ಗಾಯಾಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಾಗೊಂಡಿದ್ದ ಬಾಲಕ ಸಾವು

ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಪಟ್ಟಣದ ರಾಮ ಮಂದಿರ ನಿವಾಸಿ ಭರತ್ ( 14 ) ಸಾವನ್ನಪ್ಪಿದ್ದಾನೆ. ನಿನ್ನೆ ಶಾಲೆಗೆ ರಜೆಯಿದ್ದ ಕಾರಣ ಬಾಲಕ ಭರತ್​​ ಸ್ನೇಹಿತರ ಜೊತೆ ಕ್ರಿಕೆಟ್ ಆಡಲು‌‌ ಪಟ್ಟಣದ ಪದವಿ ಪೂರ್ವ ಕಾಲೇಜು ಮೈದಾನಕ್ಕೆ ಹೋಗಿದ್ದಾನೆ.

ಓದಿ:ಆ್ಯಪ್​ ಮೂಲಕ ಏರ್ ಟಿಕೆಟ್ ಬುಕ್​​ ಮಾಡಿದವನಿಗೆ 7 ಲಕ್ಷ ದೋಖಾ!

ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಬಾಲಕರ ಮೇಲೆ ಹೆಜ್ಜೇನು ಏಕಾಏಕಿ ಅಟ್ಯಾಕ್ ಮಾಡಿದೆ. ಬಾಲಕ ಭರತ್ ಮೇಲೆ ಗಂಭೀರ ರೀತಿಯಲ್ಲಿ ಹೆಜ್ಜೇನುಗಳು ದಾಳಿ ನಡೆಸಿದ್ದವು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನ ಆಸ್ವತ್ರೆಗೆ ಸೇರಿಸಲಾಗಿತ್ತು. ಆದ್ರೂ ಚಿಕಿತ್ಸೆ ಫಲಿಸದೆ‌ ಇಂದು ಆಸ್ವತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

Last Updated : Jan 4, 2021, 10:38 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.