ನೆಲಮಂಗಲ : ಅತೃಪ್ತ ಶಾಸಕರು ತೆಗೆದುಕೊಳ್ಳುತ್ತಿರುವ ನಿರ್ಧಾರ ನಿಮ್ಮ ಹಾಗೂ ರಾಜ್ಯದ ಭವಿಷ್ಯಕ್ಕೆ ಮಾರಕವಾಗಲಿದೆ. ನಿಮ್ಮ ನಿಲುವನ್ನು ನೀವೇ ಯೋಚಿಸಿ ಎಂದು ವಿರೋಧ ಪಕ್ಷ ಮತ್ತು ಅತೃಪ್ತ ಶಾಸಕರ ವಿರುದ್ಧ ಸಿಎಂ ಕುಮಾರಸ್ವಾಮಿ ಕಿಡಿಕಾರಿದರು.
ರಾಜಕೀಯ ಜಂಜಾಟದ ನಡುವೆಯೂ ಸಿಎಂ ಕುಮಾರಸ್ವಾಮಿ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯ ನೂತನ ಕಟ್ಟಡ ಹಾಗೂ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಸಮುದಾಯ ಭವನದ ಉದ್ಫಾಟನೆ ಹಾಗೂ ವಿವಿಧ ಭದ್ರತಾ ಯೋಜನೆ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಸಮಾರಂಭದಲ್ಲಿ ಭಾಗಿಯಾದರು.