ETV Bharat / state

ಆಸ್ಪತ್ರೆ ಕಿಟಕಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕೊರೊನಾ ಸೋಂಕಿತ ಸಾವು

ಆತ್ಮಹತ್ಯೆಗೆ ಯತ್ನಿಸಿದ್ದ ಕೊರೊನಾ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿ ಗಾಯಗೊಂಡಿದ್ದ. ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾನೆ.

corona
ಕೊರೊನಾ
author img

By

Published : Jan 25, 2021, 12:35 PM IST

ನೆಲಮಂಗಲ: ಆಸ್ಪತ್ರೆ ಕಿಟಕಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕೊರೊನಾ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ತಾಲೂಕಿನ ಹನುಮಂತಗೌಡನಪಾಳ್ಯದ 42 ವರ್ಷದ ಸೋಂಕಿತ ಮೃತ ವ್ಯಕ್ತಿ. ಕೊರೊನಾ ಸೋಂಕಿಗೆ ತುತ್ತಾಗಿದ್ದ ಈತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜನವರಿ 19 ರಂದು ಆಸ್ಪತ್ರೆಯ ಕಿಟಕಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೇ ವೇಳೆ ಗಂಭೀರ ಗಾಯಗೊಂಡಿದ್ದ ಸೋಂಕಿತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇಂದು ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದು, ಈ ಬಗ್ಗೆ ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.