ದೊಡ್ಡಬಳ್ಳಾಪುರ : ಅಪರಿಚಿತ ವಾಹನವೊಂದು ಪಾದಚಾರಿ ವೃದ್ಧನಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮುತ್ತುಗದಹಳ್ಳಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 207ರ ಮುತ್ತುಗದಹಳ್ಳಿ ಕ್ರಾಸ್ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವೃದ್ದನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ವೃದ್ಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ವೃದ್ಧ ಸುಮಾರು 65 ರಿಂದ 70 ವರ್ಷದವರಾಗಿರಬಹುದೆಂದು ಅಂದಾಜಿಸಲಾಗಿದೆ. ವಾರಸುದಾರರು ಇದ್ದಲ್ಲಿ ಅಥವಾ ಸುಳಿವು ಸಿಕ್ಕಲ್ಲಿ ದೊಡ್ಡಬೆಳವಂಗಲ ಪೊಲೀಸ್ ಠಾಣೆ PSI ಮೊಬೈಲ್ ನಂ: 9480802455 ಗೆ ಮಾಹಿತಿ ನೀಡುವಂತೆ ಪೊಲೀಸರು ಕೋರಿದ್ದಾರೆ.