ಬೆಂಗಳೂರು: ದೇವಾಲಯದಲ್ಲಿದ್ದ ಹುಂಡಿ ಒಡೆದು 3 ಕೆಜಿ ಬೆಳ್ಳಿ ಆಭರಣ ಕಳವು ಮಾಡಿರುವ ಘಟನೆ ದೇವನಹಳ್ಳಿ ತಾಲೂಕಿನ ಬೈರಾಪುರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದಿದೆ.
ಎಂದಿನಂತೆ ನಿನ್ನೆ ಕೂಡ ಪೂಜೆ ಮುಗಿಸಿ ದೇವಾಲಯಕ್ಕೆ ಬೀಗ ಹಾಕಿ ಅರ್ಚಕರು ಮನೆಗೆ ತೆರಳಿದ್ದರು. ಇದೇ ಸಮಯಕ್ಕಾಗಿ ಹೊಂಚು ಹಾಕಿದ್ದ ಚೋರರು ತಡರಾತ್ರಿ ದೇವಾಲಯಕ್ಕೆ ನುಗ್ಗಿ ಹಣ ಹಾಗೂ ಬೆಳ್ಳಿ ಆಭರಣ ಕದ್ದು ಪರಾರಿಯಾಗಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ವಿಜಯಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.