ದೇವನಹಳ್ಳಿ: ರಾಜ್ಯಾದ್ಯಂತ ಇಂದಿನಿಂದ ಸಾರ್ವಜನಿಕ ಸಾರಿಗೆ ಆರಂಭವಾಗಿದ್ದು, ಬಸ್ ನಿಲ್ದಾಣದಲ್ಲಿ ಬಸ್ ಹತ್ತಲು ಜನರು ಮುಗಿಬಿದ್ದಿದ್ದಾರೆ.
ಲಾಕ್ಡೌನ್ನಿಂದಾಗಿ ಕಳೆದ ಮೂರು ತಿಂಗಳಿಂದ ಯಾವುದೇ ರೀತಿಯ ಸಾರಿಗೆ ವ್ಯವಸ್ಥೆ ಇರಲಿಲ್ಲ. ಇಂದಿನಿಂದ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದ್ದು, ಬೆಳಗ್ಗೆಯಿಂದಲೇ ಬಿಎಂಟಿಸಿ ಸೇವೆ ಆರಂಭವಾಗಿದೆ. ಬೆಂಗಳೂರಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಸ್ ನಿಲ್ದಾಣಕ್ಕೆ ಆಮಿಸಿದ್ದ ದೃಶ್ಯಗಳು ಕಂಡು ಬಂದಿವೆ.
ಬಸ್ ಬಂದ ತಕ್ಷಣವೇ ಸೀಟ್ ಹಿಡಿಯಲು ನಾ ಮುಂದು, ತಾ ಮುಂದು ಎನ್ನುತ್ತ ಬಸ್ ಹತ್ತಲು ಪ್ರಯಾಣಿಕರು ಮುಂದಾದರು. ಈ ವೇಳೆ ನೂಕುನುಗ್ಗಲು ಉಂಟಾಗಿತ್ತು. ಅಲ್ಲದೆ ಬಸ್ ಹತ್ತಿದ ನಂತರ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪಕ್ಕ ಪಕ್ಕದಲ್ಲೇ ಕುಳಿತಿದ್ದರು. ಇದನ್ನು ಕಂಡ ಬಸ್ ನಿರ್ವಾಹಕರು ಒಂದು ಸೀಟ್ನಲ್ಲಿ ಒಬ್ಬಬ್ಬರೇ ಕುಳಿತುಕೊಳ್ಳುವಂತೆ ಸೂಚಿಸಿದರು.