ನೆಲಮಂಗಲ: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಾವಣಗೆರೆ ಮೂಲದ ವ್ಯಕ್ತಿವೋರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನೆಲಮಂಗಲ ತಾಲೂಕಿನ ಮಹಿಮಾಪುರದ ರಾಷ್ಟ್ರೀಯ ಹೆದ್ದಾರಿ-4 ರ ಬಳಿ ಈ ಅಪಘಾತ ಸಂಭವಿಸಿದೆ. ದಾವಣಗೆರೆ ನಿವಾಸಿ ಸ್ಯಾಮ್‌ಸನ್ (28)ಸ್ಥಳದಲ್ಲೇ ಸಾವನ್ನಪ್ಪಿದ್ದು, ಪ್ರವೀಣ್, ಸ್ವಪ್ನಿಲ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳು ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕ ನಟರಾಜ್ ನನ್ನು ವಶಕ್ಕೆ ಪಡೆದಿದ್ದಾರೆ.