ETV Bharat / state

ಗುದದ್ವಾರದಲ್ಲಿ ಇಟ್ಟುಕೊಂಡು ಚಿನ್ನದ ಬಿಸ್ಕತ್ ಸಾಗಣೆ: ಇಬ್ಬರು ಖದೀಮರ ಬಂಧನ - Customs Officers Operation at Bangalore Kempegowda Airport

ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರ ಬಂಧನ - ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಪರಿಶೀಲನೆ - ತಪಾಸಣೆ ವೇಳೆ ಅಕ್ರಮ ಬಯಲಿಗೆ

two-arrested-in-illegal-gold-shipping-at-bengaluru-airport
ಗುದದ್ವಾರದಲ್ಲಿ ಇಟ್ಟು ಚಿನ್ನದ ಬಿಸ್ಕತ್ ಸಾಗಾಟ: ಇಬ್ಬರ ಬಂಧನ
author img

By

Published : Aug 6, 2022, 8:47 PM IST

ದೇವನಹಳ್ಳಿ: ಚಿನ್ನದ ಬಿಸ್ಕತ್​ ತುಂಬಿದ್ದ ರಬ್ಬರ್ ಚೀಲವನ್ನು ಗುದದ್ವಾರದಲ್ಲಿ ಇಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ 69.74 ಲಕ್ಷ ಮೌಲ್ಯದ 1 ಕೆ.ಜಿ 334 ಗ್ರಾಂ ತೂಕದ ಬಂಗಾರ ವಶಕ್ಕೆ ಪಡೆಯಲಾಗಿದೆ.

ಶ್ರೀಲಂಕಾ ಏರ್​​ಲೈನ್ಸ್ ಮೂಲಕ ಮುಂಬೈನಿಂದ ಬೆಂಗಳೂರಿಗೆ ಬಂದ ಇಬ್ಬರು ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಅಕ್ರಮ ಸಾಗಣೆ ಬೆಳಕಿಗೆ ಬಂದಿದೆ. ಆರಂಭಿಕ ತಪಾಸಣೆ ವೇಳೆ ಚಿನ್ನ ಪತ್ತೆಯಾಗಿಲ್ಲ. ಬಳಿಕ ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕ ಕೊಠಡಿಗೆ ಕರೆದೊಯ್ದು ತಪಾಸಣೆ ಮಾಡಿದಾಗ ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟಿರುವುದು ಗೊತ್ತಾಗಿದೆ.

ಇಬ್ಬರನ್ನೂ ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮುಂಬೈ: ₹1,400 ಕೋಟಿ ಮೌಲ್ಯದ ಮೆಫೆಡ್ರೊನ್ ಡ್ರಗ್ಸ್​ ವಶ, ಐವರ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.