ಆನೇಕಲ್ (ಬೆಂಗಳೂರು ಗ್ರಾ.): ಸ್ನೇಹಿತರಿಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಆನೇಕಲ್ ತಾಲೂಕಿನ ಯಾರಂಡಳ್ಳಿಯಲ್ಲಿ ನಡೆದಿದೆ.
ವಿಕಾಸ್ ಕೊಲೆಯಾದ ಯುವಕ. ಶುಕ್ರವಾರ ಸಂಜೆ ಪೀಟರ್ ಹಾಗೂ ವಿಕಾಸ್ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ ಪೀಟರ್ ಎಂಬಾತ ವಿಕಾಸ್ ಎದೆ ಹಾಗೂ ಕುತ್ತಿಗೆ ಭಾಗಕ್ಕೆ ಮಾರಕಾಸ್ತ್ರಗಳಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾದ ಪರಿಣಾಮ ವಿಕಾಸ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಕುರಿತು ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಪಿ ಲಕ್ಷ್ಮೀ ಗಣೇಶ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.