ETV Bharat / state

ಚುನಾವಣೆಗೆ ಇನ್ನೂ ಎರಡು ವರ್ಷ ಇದೆ, ಮ್ಯಾಜಿಕ್ ನಂಬರ್ ಬಳಿಕವೇ ಸಿಎಂ ಆಯ್ಕೆ: ಹೆಚ್ ಎಂ ರೇವಣ್ಣ

ಚುನಾವಣೆಯಲ್ಲಿ ಗೆದ್ದು ಬಹುಮತ ಬಂದ ನಂತರ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದು ಸ್ವಾಭಾವಿಕ. ಆದರೆ ಈಗಲೇ ಮುಂದಿನ ಮುಖ್ಯಮಂತ್ರಿಯ ಬಗ್ಗೆ  ಮಾತನಾಡುವುದು ಅಪ್ರಸ್ತುತ ಮತ್ತು ಅವಶ್ಯಕತೆ ಇಲ್ಲವೆಂದು ಮಾಜಿ ಸಚಿವ  ಹೆಚ್.ಎಂ. ರೇವಣ್ಣ ತಿಳಿಸಿದ್ದಾರೆ.

author img

By

Published : Jun 30, 2021, 5:05 PM IST

hm-rewanna
ಹೆಚ್. ಎಂ. ರೇವಣ್ಣ

ದೊಡ್ಡಬಳ್ಳಾಪುರ: ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿಕೆಶಿ ಮತ್ತು ದಲಿತ ನಾಯಕರ ಹೆಸರುಗಳು ಕೇಳಿಬರುತ್ತಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಎಂ. ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಶಾಸಕ ಟಿ. ವೆಂಕಟರಮಣಯ್ಯ ನಡೆಸುತ್ತಿರುವ ಅನ್ನದಾಸೋಹ ಕಾರ್ಯಕ್ರಮ ವೀಕ್ಷಣೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ, ಎಲೆಕ್ಷನ್​ನಲ್ಲಿ ಗೆದ್ದು ಮ್ಯಾಜಿಕ್ ನಂಬರ್ ಪಡೆದ ಬಳಿಕವೇ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು ಎಂದರು.

ಮಾಜಿ ಸಚಿವ ಹೆಚ್.ಎಂ. ರೇವಣ್ಣ ಮಾತನಾಡಿದರು

ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಮುಂದಿನ ಮುಖ್ಯಮಂತ್ರಿ ಚರ್ಚೆ ಈಗ ಅಪ್ರಸ್ತುತ. ಕೊರೊನಾ ಸಮಯದಲ್ಲಿ ಸಂಕಷ್ಟಕ್ಕೆ ತುತ್ತಾದ ಜನರ ಕಷ್ಟ ಆಲಿಸುವ ಕೆಲಸವನ್ನು ಕಾಂಗ್ರೆಸ್​ನವರು ಮಾಡಬೇಕು. ಚುನಾವಣೆಗೆ ಇನ್ನೂ ಎರಡು ವರ್ಷ ಇದೆ ಎಂದು ತಿಳಿಸಿದರು.

ಡಿ ಕೆ ಶಿವಕುಮಾರ್ ಇತಿಶ್ರೀ ಹಾಡಿದ್ದಾರೆ: ಮುಂದಿನ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇತಿಶ್ರೀ ಹಾಡಿದ್ದಾರೆ. ಕೊರೊನಾ ಸಮಯದಲ್ಲಿ ಬಿಜೆಪಿ ಸರ್ಕಾರದ ನ್ಯೂನ್ಯತೆಗಳು ಮತ್ತು ಭ್ರಷ್ಟಾಚಾರದ ಬಗ್ಗೆ ಕಾರ್ಯಕ್ರಮ ಮಾಡಲಾಗುವುದು. ಇದು ಕಾಂಗ್ರೆಸ್ ಪಕ್ಷದ ಮುಂದಿರುವ ಪ್ರಸ್ತುತ ಕೆಲಸ ಎಂದು ರೇವಣ್ಣ ತಿಳಿಸಿದರು.

ಓದಿ: ನಾಳೆಯಿಂದ Online class.. ಗ್ರಾಮೀಣ ಭಾಗದಲ್ಲಿ ಶೇ.5ರಷ್ಟು ಮಕ್ಕಳ ದಾಖಲಾತಿಯಾಗಿಲ್ಲ ಎಂದ ರೂಪ್ಸಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.