ETV Bharat / state

ನೆಲಮಂಗಲ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 20 ಲಕ್ಷ , ಬೆಳ್ಳಿ ವಸ್ತು, ಸೀರೆ ವಶ

ಬೆಂಗಳೂರಿನಿಂದ ತುಮಕೂರು ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಖಲೆಯಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 17 ಲಕ್ಷ ಹಣವನ್ನು ನೆಲಮಂಗಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ ಪೊಲೀಸರು

author img

By

Published : Mar 27, 2023, 7:31 PM IST

ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿದರು

ನೆಲಮಂಗಲ : ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 20 ಲಕ್ಷ ರೂ. ಹಾಗೂ ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ 48 ಕೆಜಿ ಬೆಳ್ಳಿ, ವಿವಿಧ ಉಡುಪು, ಬಟ್ಟೆಗಳು ಸೇರಿ ಸುಮಾರು 42 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಕಾರಿನಲ್ಲಿ ಲಗೇಜ್ ಬ್ಯಾಗ್​ನಲ್ಲಿರುವ ಹಣ ಬೆಳ್ಳಿ ವಸ್ತುಗಳು

ನೆಲಮಂಗಲ ಟೌನ್ ಪೊಲೀಸ್ ಇನ್ಸ್​ಪೆಕ್ಟರ್​ ಎಸ್​ ಡಿ ಶಶಿಧರ್ ಹಾಗೂ ಸಬ್​​ಇನ್ಸ್​ಪೆಕ್ಟರ್​ಗಳಾದ ಜಯಂತಿ, ಶಮಂತ್ ಗೌಡ್ರು ಗಸ್ತಿನಲ್ಲಿದ್ದಾಗ ಬೆಂಗಳೂರು ಕಡೆಯಿಂದ ತುಮಕೂರು ಕಡೆ ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ದಾಖಲೆಯಿಲ್ಲದ 17 ಲಕ್ಷ ಹಣ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಚಾಲಕ ಅಕ್ಷಯ್ ಬಳಿ ವಿಚಾರಿಸಿದಾಗ ಯಾವುದೇ ದಾಖಲೆ ಇಲ್ಲದ್ದು ಕಂಡುಬಂದು ತಕ್ಷಣ ಹಣದೊಂದಿಗೆ ವಾಹನವನ್ನು ತಂದು ವಿಚಾರಣೆ ಮಾಡಲಾಗುತ್ತಿದೆ ಮತ್ತು ಇನ್ಸ್​ಪೆಕ್ಟರ್​​ ಎಸ್​ ಡಿ ಶಶಿಧರ್, ಪಿಎಸ್ಐಗಳಾದ ವರಲಕ್ಷ್ಮೀ, ಶಮಂತ್ ಗೌಡ್ರು ಹಾಗೂ ಸಿಬ್ಬಂದಿ ಹಣಮಂತ ಹಿಪ್ಪರಗಿ ಖಚಿತ ಮಾಹಿತಿ ಮೇರೆಗೆ ಬ್ಯಾಡರಹಳ್ಳಿ ಗೇಟ್ ಬಳಿ ಸೂಕ್ತ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 3 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಕಾರಿನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದಿರುವುದು

ಚಾಲಕ ಮಾನವ್ ದೀಪ್​ಸಿಂಗ್ ಬಳಿ ಯಾವುದೇ ದಾಖಲೆಗಳು ಇಲ್ಲವಾಗಿದ್ದು, ಸೂಕ್ತ ದಾಖಲೆ ತರುವಂತೆ ಸೂಚಿಸಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್​ ಎ ರಾಜೀವ್ ಹಾಗೂ ಸಿಬ್ಬಂದಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಚೆಕ್​ಪೋಸ್ಟ್ ಬಳಿ ವಾಹನ ತಪಾಸಣೆ ಮಾಡುವಾಗ 20,22,300 ರೂ. ಮೌಲ್ಯದ 48 ಕೆಜಿ 156 ಗ್ರಾಂ ಬೆಳ್ಳಿ ಹಾಗೂ 1,23,000 ರೂ. ಮೌಲ್ಯದ 410 ಸೀರೆಗಳು, 87,800 ರೂ.ಮೌಲ್ಯದ 439 ಚೂಡಿದಾರ್‌ಗಳು, ಸುಮಾರು 39 ಸಾವಿರ ರೂ. ಮೌಲ್ಯದ ಪ್ಯಾಂಟ್ ಬಟ್ಟೆ, 9,800 ರೂ. ಮೌಲ್ಯದ 49 ಶರ್ಟ್ ಪೀಸ್‌ಗಳು ಪತ್ತೆಯಾಗಿದ್ದು, ಸೂಕ್ತ ದಾಖಲೆ ಇಲ್ಲದ ಕಾರಣ ವಶಕ್ಕೆ ಪಡೆಯಲಾಗಿದೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ ಪೊಲೀಸರು
ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ ಪೊಲೀಸರು

ಒಟ್ಟಾರೆ ಜಿಲ್ಲಾ ಎಸ್​ ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ಆದೇಶದ ಮೇರೆಗೆ ರಾಜ್ಯ ವಿಧಾನಸಭಾ ಚುನಾವಣಾ ಪ್ರಯುಕ್ತ ಮುಂಜಾಗ್ರತವಾಗಿ ವಾಹನಗಳ ತಪಾಸಣೆ ನಡೆಸುತ್ತಿದ್ದು, ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಹಾಗೂ ನೆಲಮಂಗಲ-ಹಾಸನ ಹೆದ್ದಾರಿಯಲ್ಲಿ ಚೆಕ್ ಪೋಸ್ಟ್​ಗಳನ್ನು ನಿರ್ಮಿಸಿ ವಾಹನಗಳನ್ನು ಕಟ್ಟುನಿಟ್ಟಾಗಿ ಪರಿಶೀಲನೆ ಮಾಡಲಾಗುತ್ತಿದೆ. ನೆಲಮಂಗಲ ಉಪವಿಭಾಗದಲ್ಲಿ ಒಟ್ಟು 42,83,320 ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಂತಾರಾಜ್ಯ ಕಳ್ಳರ ಬಂಧನ: ವಿವಿಧ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್​ ಪಿ ಮಲ್ಲಿಕಾರ್ಜುನ ಬಾಲದಂಡಿ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಮಾಧ್ಯಮಗೋಷ್ಟಿ ನಡೆಸಿದ್ರು. ಡಿವೈಎಸ್​ಪಿ ಕೆ ಸಿ ಗೌತಮ್, ಇನ್ಸ್​ಪೆಕ್ಟರ್​ಗಳಾದ ಮಂಜುನಾಥ್ ಹಾಗೂ ಎಸ್​ ಡಿ ಶಶಿಧರ್ ನೇತೃತ್ವದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ನೆಲಮಂಗಲ ಉಪವಿಭಾಗದಲ್ಲಿ ನಡೆದ ಅಪರಾಧ ಪ್ರಕರಣಗಳನ್ನು ಪೊಲೀಸ್ ಅಧಿಕಾರಿಗಳು ಶೀಘ್ರವಾಗಿ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಹೀಗಾಗಿ ಅವರ ಈ ಕೆಲಸಕ್ಕೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪ್ರಶಂಸಿಸಲಾಯಿತು.

ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ನೆಲಮಂಗಲ-ಸೊಂಡೆಕೊಪ್ಪ ಮುಖ್ಯರಸ್ತೆಯ ಭೈರೇಗೌಡನಹಳ್ಳಿ ಬಳಿ ಚಂದ್ರಶೇಖರ್ ಅಲಿಯಾಸ್ ಚಂದು ಹತ್ಯೆ ಕೇಸಿಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಇನ್ಸ್​ಪೆಕ್ಟರ್​​ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕೆ ಚಂದನ್, ಗೌತಮ್ ಹಾಗೂ ರಾಜೇಶ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಮಾದಕ ವಸ್ತು ಮಾರಾಟ ಮಾಡುತ್ತಿದ್ದವರ ಬಂಧನ: ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳರನ್ನು ಬಂಧಿಸಿ 5 ಲಕ್ಷ ಹಣವನ್ನು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಬೈಕ್ ವಶಕ್ಕೆ ಪಡೆಯಲಾಗಿದೆ. ಇನ್ಸ್​ಪೆಕ್ಟರ್​ ಮಂಜುನಾಥ್ ಮತ್ತು ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆಂಧ್ರಪ್ರದೇಶ ಮೂಲದ ವಿದೇಶ್ ಪಿಚೆಲ್ ಹಾಗೂ ತಮಿಳುನಾಡಿನ ಜೀವನ್ ಎಂಬ ಕುಖ್ಯಾತ ಕಳ್ಳರನ್ನು ಬಂಧಿಸಲಾಗಿದೆ. ಮತ್ತು ವಿಧ್ಯಾಭ್ಯಾಸಕ್ಕೆಂದು ಬೆಂಗಳೂರಿಗೆ ಬಂದು ವಿಲಾಸಿ ಜೀವನಕ್ಕಾಗಿ ಲಾರಿ ಪಾರ್ಕಿಂಗ್ ಬಳಿ ಹಾಗೂ ಕಾಲೇಜುಗಳ ಬಳಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಅನ್​ಪ್ರೀತ್ ಸಲೀನ್ ಅಲಿಯಾಸ್ ಸಲಿನ್ ಹಾಗೂ ಆಕಾಶ್ ವಿನಿಯನ್ ಮತ್ತು ಕುಣಿಗಲ್ ತಾಲ್ಲೂಕಿನ ರಘು. ಕೆ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಅಮಾಯಕ ಯುವಕನ‌ ಹತ್ಯೆ ಮಾಡಿದ ಹಾಗೂ ಗಮನವನ್ನು ಬೇರೆಡೆ ಸೆಳೆದು ಅಮಾಯಕರ ಹಣವನ್ನು ದೋಚುತ್ತಿದ್ದ ಖತರ್ನಾಕ್ ಕಳ್ಳರನ್ನು ಮತ್ತು ವಿದ್ಯಾಭ್ಯಾಸದ ಹೆಸರೇಳಿ ಬಂದು ಮೋಜಿಗಾಗಿ ಶೋಕಿ ಲೈಫ್​ಗಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ : ನಕಲಿ ದಾಖಲೆ ಸೃಷ್ಟಿಸಿ‌ ಫೈನಾನ್ಸ್ ಕಂಪನಿಗೆ ಟೋಪಿ ಹಾಕಿದ‌ ವಂಚಕರು‌ ಅಂದರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.