ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2ರಂದು ಮಂಗಳೂರಿನ ಭೇಟಿ ನೀಡುತ್ತಿದ್ದಾರೆ. ಇದಕ್ಕೆ ಒಂದು ದಿನ ಮುಂಚಿತವಾಗಿಯೇ ಅಂದರೆ ಸೆಪ್ಟೆಂಬರ್ 1ರಂದು ಬಿಜೆಪಿಯ ಮತ್ತೋರ್ವ ನಾಯಕ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಬರುತ್ತಿದ್ದಾರೆ.
ಮಂಗಳೂರಿನಲ್ಲಿ ಪ್ರಧಾನಿ ಮೋದಿ ಸುಮಾರು 3,800 ಕೋಟಿ ರೂಪಾಯಿ ವೆಚ್ಚದ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವರು. ಇದಕ್ಕಾಗಿ ಈಗಾಗಲೇ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಅಲ್ಲದೇ, ಎಸ್ಪಿಜಿ ತಂಡ ಪರಿಶೀಲನೆ ನಡೆಸಿ, ಭದ್ರತಾ ವ್ಯವಸ್ಥೆಗಳ ಮೇಲೆ ವಿಶೇಷ ನಿಗಾ ಇರಿಸಿದೆ.
ಇತ್ತ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಒಂದು ದಿನದ ಮಟ್ಟಿಗೆ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಬೆಂಗಳೂರು ಸಮೀಪದ ನೆಲಮಂಗಲದಲ್ಲಿ ಎಸ್ಡಿಎಂ ಕಾಲೇಜಿನ ಪ್ರಕೃತಿ ಚಿಕಿತ್ಸೆ ಹಾಗೂ ಯೋಗಿ ವಿಜ್ಞಾನದ ಕ್ಷೇಮವನ ಘಟಕವನ್ನು ಅವರು ಉದ್ಘಾಟಿಸಲಿದ್ದಾರೆ.
ಇದನ್ನೂ ಓದಿ: ಸೆಪ್ಟಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ: ಕಡಲೂರಲ್ಲಿ ಎಸ್ಪಿಜಿ ತಂಡದಿಂದ ಪರಿಶೀಲನೆ