ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹಳೇನಿಜಗಲ್ಲು ರೈಲ್ವೆ ನಿಲ್ದಾಣದ ಬಳಿಯ ರೈಲ್ವೆ ಬ್ರಿಡ್ಜ್ ಕಾಮಗಾರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈಲ್ವೆ ಬ್ರಿಡ್ಜ್ ಕಾಮಗಾರಿ ಆರಂಭವಾಗಿ ವರ್ಷಗಳೇ ಕಳೆದರೂ ಇನ್ನೂ ಮುಗಿಯುವ ಹಾಗೆ ಕಾಣುತ್ತಿಲ್ಲ ಎಂದು ಗ್ರಾಮಸ್ಥರು ಗುತ್ತಿಗೆದಾರರ ವಿರುದ್ಧ ಆರೋಪ ಮಾಡಿದ್ದಾರೆ.
ರೈಲ್ವೆ ಅಂಡರ್ ಪಾಸ್ ಕಾಮಗಾರಿಯ ಬಗ್ಗೆ ಯಾವುದೇ ಜನಸಂಪರ್ಕ ಸಭೆ ಕರೆದಿಲ್ಲ. ಕಾಮಗಾರಿಯಿಂದ ಜನರಿಗಾಗಿರುವ ತೊಂದರೆಗಳ ಬಗ್ಗೆ ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಮಗಾರಿಯು ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ ಅಡಿಯಲ್ಲಿ 1 ಕೋಟಿ 80 ಲಕ್ಷ ವೆಚ್ಚದಲ್ಲಿ ದ್ವಿಪಥ ರಸ್ತೆ ನಿರ್ಮಾಣವಾಗಬೇಕಿತ್ತು. ಆದರೆ ಸಂಬಂಧಪಟ್ಟ ಅಧಿಕಾರಿಗಳು ಜನರ ಸುಗಮ ಸಂಚಾರಕ್ಕೆ ದ್ವಿಪಥ ರಸ್ತೆ ಮಾಡುವ ಬದಲು ಏಕಪಥ ಮಾಡುತ್ತಿರುವುದು ತೊಂದರೆಯಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.
ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಅಂದು ಗ್ರಾಮಸ್ಥರು ಪಟ್ಟು ಹಿಡಿದಾಗ, ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.