ದೊಡ್ಡಬಳ್ಳಾಪುರ: ಕಳೆದ ಮೂರು ದಿನಗಳಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆಯ ಅರ್ಭಟ ಜೋರಾಗಿದ್ದು, ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಬಳಿಯಿರುವ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ತುಂಬಿದೆ. ಜಲಪಾತದ ಸೌಂದರ್ಯವನ್ನು ಜನರು ಕಣ್ತುಂಬಿಕೊಳ್ಳುತ್ತಿದ್ದಾರೆ.
1917 ರಲ್ಲಿ ಸರ್.ಎಂ.ವಿಶ್ವೇಶ್ವರಯ್ಯನವರು ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಜಾಗದಲ್ಲಿ ಪಿಕಪ್ ಡ್ಯಾಂ ನಿರ್ಮಾಣ ಮಾಡಿದ್ದರು. ಆದರೆ ಸೂಕ್ತ ನಿರ್ವಹಣೆ ಇಲ್ಲದೆ ಡ್ಯಾಂ ಹಾಳಾಗಿತ್ತು. ಇತ್ತೀಚೆಗೆ 50 ಕೋಟಿ ವೆಚ್ಚದಲ್ಲಿ ಡ್ಯಾಂ ದುರಸ್ತಿ ಮಾಡಲಾಗಿದೆ.
ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಈ ವರ್ಷದಲ್ಲಿಯೇ ಮೊದಲ ಬಾರಿಗೆ ತುಂಬಿ ಜಲಪಾತವಾಗಿ ಧುಮ್ಮಿಕ್ಕುತ್ತಿದ್ದು, ಸುತ್ತಮುತ್ತಲಿನ ಜನರು ಜಲಪಾತದ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.