ETV Bharat / state

ಬ್ರಾಹ್ಮಣರು ಯಾಕೆ ಸಿಎಂ ಆಗಬಾರದು?: ಹೆಚ್​ಡಿಕೆ ಹೇಳಿಕೆಗೆ ಪೇಜಾವರ ಶ್ರೀ ಬೇಸರ

ರಾಜ್ಯದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಬ್ರಾಹ್ಮಣರ ಬಗ್ಗೆ ನೀಡಿದಂತಹ ಹೇಳಿಕೆಯ ಬಗ್ಗೆ ವಿವಿಧ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಇದೀಗ ಪೇಜಾವರ ಶ್ರೀ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಪೇಜಾವರ ಶ್ರೀ
ಪೇಜಾವರ ಶ್ರೀ
author img

By

Published : Feb 6, 2023, 5:39 PM IST

ಪೇಜಾವರ ಶ್ರೀ

ಮಂಡ್ಯ: ಹಿಂದಿನಿಂದಲೂ ಬ್ರಾಹ್ಮಣರ ವಿರುದ್ಧದ ಹೇಳಿಕೆಗಳು ಕೇಳಿ ಬರ್ತಿದೆ. ಪ್ರತಿ ಚುನಾವಣೆ ಬಂದಾಗ ಇದು ಹೆಚ್ಚು ಕಾಣುತ್ತೆ. ಬ್ರಾಹ್ಮಣರು ಯಾರೂ ಧ್ವನಿ ಎತ್ತಿ ಮಾತನಾಡುವವರು ಇಲ್ಲ, ಸಂಖ್ಯಾಬಲ ಇಲ್ಲ, ಅಲ್ಪ ಸಂಖ್ಯಾತರು ಇದ್ದಾರೆ. ಆದ್ದರಿಂದ ಏನು ಮಾತನಾಡಿದರೂ ನಡೆಯತ್ತೆ ಎಂಬ ಭಾವನೆ ಇದೆ. ಒಂದು ವೇಳೆ ಬ್ರಾಹ್ಮಣರು ಸಿಎಂ ಆಗುವುದಾದರೆ ಆಗಲಿ ಎಂದು ಪೇಜಾವರ ಶ್ರೀ ಅವರು ಹೇಳಿದ್ದಾರೆ.

ಮಂಡ್ಯದ ಮದ್ದೂರಿನ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ರು. ಬಳಿಕ ಮಾತನಾಡಿದ ಅವರು, ಹೆಚ್​ಡಿಕೆ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದರು. ಯಾಕೆ ಬ್ರಾಹ್ಮಣ ಸಮುದಾಯದವರು ಸಿಎಂ ಆಗಬಾರದಾ?. ರಾಜ್ಯದಲ್ಲಿ ಬ್ರಾಹ್ಮಣ MLA ಎಷ್ಟು ಜನ ಇದ್ದಾರೆ.? ಎಷ್ಟು ಮಂದಿಗೆ ಟಿಕೆಟ್ ಕೊಟ್ಟಿದ್ದಾರೆ? ಎಂದು ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ. ಇನ್ನೂ ಮಾತನಾಡುವವರು ಏನು ಬೇಕಾದರೂ ಮಾತನಾಡುತ್ತಾರೆ. ಹಿನ್ನೆಲೆ ಅಥವಾ ಪುರಾವೆ ಇಟ್ಟುಕೊಂಡು ಮಾತನಾಡಬೇಕು. ಒಂದು ವೇಳೆ ಬ್ರಾಹ್ಮಣರು ಮುಖ್ಯಮಂತ್ರಿ ಆಗೋದಾದರೆ ಆಗಲಿ. ಯಾಕೆ ಬ್ರಾಹ್ಮಣರು ಸಿಎಂ ಆಗಬಾರದು..? ಅವರು ಭಾರತದ ಪ್ರಜೆಗಳಲ್ಲವೆ..? ಎಂದು ಪ್ರಶ್ನಿಸಿದರು.

ಪ್ರಜಾಪ್ರಭುತ್ವ ಸಮಾಜದಲ್ಲಿ ಯಾರಿಗೂ ಅನ್ಯಾಯವಾಗಬಾರದು.. ಬ್ರಾಹ್ಮಣರಿಂದಲೇ ಗಾಂಧಿ ಹತ್ಯೆ ಎಂಬ ವಿಚಾರವಾಗಿ ಮಾತನಾಡಿದಂತ ಅವರು, ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಸಮಾಜವನ್ನು ದೂಷಿಸುವುದಾದರೆ ಇತರ ಸಮಾಜದಲ್ಲಿ ನಡೆದ ವಿಚಾರವನ್ನ ಸಾಮೂಹಿಕರಣ ಮಾಡ್ತಿಲ್ಲ? ಬ್ರಾಹ್ಮಣ ಸಮಾಜವನ್ನ ದೂರಬೇಕು ಎಂದು ಯಾವುದಾದರೂ ಒಂದು ನೆಪ ಮಾಡಿ ದೂರುತ್ತಾರೆ.

ಪ್ರಜಾಪ್ರಭುತ್ವ ಸಮಾಜದಲ್ಲಿ ಯಾರಿಗೂ ಅನ್ಯಾಯವಾಗಬಾರದು. ಇವತ್ತು ಯಾವುದೋ ಸಮಾಜ, ಧರ್ಮದ ಪರವಾಗಿ ಸರ್ಕಾರ ನಡೆಯೋದಾದರೆ. ಅನ್ಯಾಯವಾದಾಗ ಒಂದು ಧರ್ಮದ ವಿರುದ್ದ ಮತ್ತೊಂದು ಧರ್ಮ ಪುಟಿದೇಳಬೇಕು. ಪ್ರಜಾಪ್ರಭುತ್ವ ಸಮಾಜದಲ್ಲಿ ಈ ರೀತಿ ಒಂದು ಧರ್ಮವನ್ನ ದೂಷಿಸುವುದು ಸರಿಯಲ್ಲ. ಯಾವ ಧರ್ಮದವರಿಗೂ ಅನ್ಯಾಯ ಆಗಬಾರದು ಎಂದು ಹೇಳಿದರು.

ಹೆಚ್​ಡಿಕೆ ಹೇಳಿದ್ದೇನು?: ಪ್ರಹ್ಲಾದ್ ಜೋಶಿ ಅವರನ್ನು ಮುಖ್ಯಮಂತ್ರಿ ಮಾಡಿ, 8 ಮಂದಿ ಉಪಮುಖ್ಯಮಂತ್ರಿ ಮಾಡುವ ಪ್ಲಾನ್ ಬಗ್ಗೆ ಆರ್​ಎಸ್ ಎಸ್ ಈಗಾಗಲೇ ದೆಹಲಿ ಕಚೇರಿಯಲ್ಲಿ ಚರ್ಚೆ ನಡೆಸಿದೆ. ಪ್ರಹ್ಲಾದ್ ಜೋಶಿ ಅವರನ್ನು ಬಿಜೆಪಿಯ ಮುಂದಿನ ಸಿಎಂ ಮಾಡಲು ಆರ್ ಎಸ್ ಎಸ್ ಹುನ್ನಾರ ಮಾಡಿದೆ ಎಂದು ಆರೋಪಿಸಿದ್ದರು.

ಜೋಶಿ ದೇಶಸ್ಥ ಬ್ರಾಹ್ಮಣ ವರ್ಗಕ್ಕೆ ಸೇರಿದವರು ಎಂದಿದ್ದ ಕುಮಾರಸ್ವಾಮಿ: ಅವರು ಶೃಂಗೇರಿ ಮಠ ಧ್ವಂಸ ಮಾಡಿದ ದೇಶಸ್ಥ ಬ್ರಾಹ್ಮಣ ವರ್ಗಕ್ಕೆ ಸೇರಿದವರು. ಅವರಿಗೆ ಸಂಸ್ಕೃತಿ ಇಲ್ಲ, ಸಂಸ್ಕೃತಿ ಬೇಕಿಲ್ಲ. ನಮ್ಮ ಭಾಗದ ಹಳೇ ಮೈಸೂರು ಭಾಗದ ಬ್ರಾಹ್ಮಣ ವರ್ಗಕ್ಕೆ ಅವರು ಸೇರಿದವರಲ್ಲ ಎಂದು ಪ್ರಹ್ಲಾದ್​ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅವರ ಈ ಹೇಳಿಕೆಗೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದರು.

ಇದನ್ನೂ ಓದಿ: ಪ್ರಹ್ಲಾದ್ ಜೋಶಿ ನಮ್ಮ ಬ್ರಾಹ್ಮಣರಲ್ಲ, ಅವರನ್ನು ಮುಂದಿನ‌ ಸಿಎಂ ಮಾಡಲು ಆರ್​ಎಸ್ಎಸ್ ನಿರ್ಧರಿಸಿದೆ: ಹೆಚ್​ಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.