ETV Bharat / state

ದೇವನಹಳ್ಳಿ: ಸ್ಯಾನಿಟರಿ ಪ್ಯಾಡ್​ನಲ್ಲಿ ಚಿನ್ನ ಸಾಗಿಸುತ್ತಿದ್ದ ಚಾಲಾಕಿ ಮಹಿಳೆ ಕಸ್ಟಮ್ಸ್ ವಶಕ್ಕೆ - ಚಿನ್ನ ಸಾಗಿಸುತ್ತಿದ್ದ ಮಹಿಳೆ ಕಸ್ಟಮ್ಸ್ ವಶಕ್ಕೆ

ಸ್ಯಾನಿಟರಿ ಪ್ಯಾಡ್​​ನೊಳಗೆ ಚಿನ್ನ ಬಚ್ಚಿಟ್ಟು ಸಾಗಿಸುತ್ತಿದ್ದ ಪ್ರಯಾಣಿಕಳನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

woman-carrying-gold-in-sanitary-pad-detained-by-customs
ಸ್ಯಾನಿಟರಿ ಪ್ಯಾಡ್​ನಲ್ಲಿ ಚಿನ್ನ ಸಾಗಿಸುತ್ತಿದ್ದ ಮಹಿಳೆ ಕಸ್ಟಮ್ಸ್ ವಶಕ್ಕೆ
author img

By

Published : Sep 17, 2022, 8:11 AM IST

ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ಸ್ಯಾನಿಟರಿ ಪ್ಯಾಡ್​​ನೊಳಗೆ ಬಚ್ಚಿಟ್ಟುಕೊಂಡು ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ 15 ಲಕ್ಷ ಮೌಲ್ಯದ 302 ಗ್ರಾಂ ತೂಕದ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಶುಕ್ರವಾರ ಬ್ಯಾಂಕಾಕ್​ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಿಳೆ ಬಂದಿದ್ದಳು. ಆಕೆಯ ಹಿನ್ನೆಲೆಯ ಬಗ್ಗೆ ಸಂಶಯಗೊಂಡ ವಾಯು ಗುಪ್ತಚರ ಘಟಕದ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಆಗ ಮಹಿಳೆಯು ಸ್ಯಾನಿಟರಿ ಪ್ಯಾಡ್​​ನಲ್ಲಿ 5 ಚಿನ್ನದ ತುಣುಕುಗಳನ್ನ ಬಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ.

ಅಧಿಕಾರಿಗಳು 15,42,750 ರೂ. ಮೌಲ್ಯದ 302.50 ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಹಿಳೆಯ ವಿಚಾರಣೆ ಮುಂದುವರೆದಿದೆ.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್, ಒಳ ಉಡುಪು, ಶೂ, ಗುದನಾಳದಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ ಪತ್ತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.