ನೆಲಮಂಗಲ (ಬೆಂಗಳೂರು ಗ್ರಾಮಾಂತರ): ನೆಲಮಂಗಲ ತಾಲೂಕಿನ ಅಪ್ಪೇಗೌಡನಪಾಳ್ಯದ ಗರ್ಭಿಣಿಯೊಬ್ಬರು ಆ್ಯಂಬುಲೆನ್ಸ್ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬಳ್ಳಾರಿ ಮೂಲದ 30 ವರ್ಷದ ದುರ್ಗಮ್ಮಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದ (ICU) ಬೆಡ್ ಇಲ್ಲದ ಕಾರಣ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸೂಚಿಸಿದ್ದರು.
ಇದನ್ನೂ ಓದಿ: ಪರೀಕ್ಷೆ ಕುರಿತು ಮಕ್ಕಳು-ಪೋಷಕರಲ್ಲಿ ಆತ್ಮವಿಶ್ವಾಸ ಮೂಡಿಸಿ: ಸಚಿವ ಸುರೇಶ್ ಕುಮಾರ್
ನಗರದ ವಾಣಿವಿಲಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿ ಮಹಿಳೆಗೆ ಹೆರಿಗೆಯಾಗಿದೆ. ಆ್ಯಂಬುಲೆನ್ಸ್ ಸಿಬ್ಬಂದಿ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದು, ಸದ್ಯ ತಾಯಿ ಮತ್ತು ಮಗು ಇಬ್ಬರೂ ಕ್ಷೇಮವಾಗಿದ್ದಾರೆ.