ಬೆಂಗಳೂರು : ಒಂಟಿ ಮಹಿಳೆಯ ಮನೆಗೆ ನುಗ್ಗಿದ ಹಂತಕನೊಬ್ಬ ಆಕೆಯ ಕೊರಳಿಗೆ ಮೊಬೈಲ್ ಚಾರ್ಜರ್ ವೈರ್ನಿಂದ ಬಿಗಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಮಹಿಳೆ ಕೊಲೆಗೈದು ಚಿನ್ನಾಭರಣ ಕಳವು
ಕೊಲೆ ಮಾಡಿದ ನಂತರ 200 ಗ್ರಾಂ ಚಿನ್ನಾಭರಣ ದೋಚಿ ಆರೋಪಿ ಪರಾರಿಯಾಗಿದ್ದಾನೆ. ಶಾರದಮ್ಮಳ ಗಂಡ ದಿನಸಿ ತರಲು ಮನೆಯಿಂದ ಹೊರ ಹೋಗಿದ್ದಾಗ ಈ ಕೃತ್ಯ ನಡೆದಿದೆ. ಕತ್ತಿನ ಭಾಗದಲ್ಲಿ ಮೊಬೈಲ್ ವೈರ್ನಿಂದ ಬಿಗಿದಿರುವ ಗುರುತು ಪತ್ತೆಯಾಗಿದ್ದು ಮನೆಯ ಹಿಂಬಾಗಿಲು ತೆರೆದಿದೆ.
ಘಟನಾ ಸ್ಥಳಕ್ಕೆ ನೆಲಮಂಗಲ ಟೌನ್ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೊಲೆ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.