ನೆಲಮಂಗಲ : ಗಂಡನ ಸಾವಿನ ನೋವು ಮರೆಯಲಾಗದೆ ಮನನೊಂದು ಹೆಂಡತಿ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ ತಾಲ್ಲೂಕಿನ ಹಸಿರುವಳ್ಳಿಯಲ್ಲಿ ನಡೆದಿದೆ.
ಚೈತ್ರ(25) ಆತ್ಮಹತ್ಯೆಗೆ ಶರಣಾದ ಗೃಹಿಣಿ.
ಕಳೆದ ನಾಲ್ಕು ವರ್ಷಗಳ ಹಿಂದೆ ಇವರು ಮದುವೆಯಾಗಿದ್ದಾರೆ. ಆದರೆ ಮೂರು ವರ್ಷಗಳ ಹಿಂದೆ ಪತಿ ಸಾವನ್ನಪ್ಪಿದ್ದು, ಈ ಸಾವಿನಿಂದ ಮಾನಸಿಕವಾಗಿ ಕುಗ್ಗಿದ್ದ ಆಕೆ ಪತಿಯ ಅಗಲಿಕೆಯ ನೋವಿನಲ್ಲೇ ನೇಣಿಗೆ ಶರಣಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.
ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.