ನೆಲಮಂಗಲ : ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ಬಾಲಕಿಯೋರ್ವಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಕಾಲೋನಿಯಲ್ಲಿ ನಡೆದಿದೆ.
ಧನಲಕ್ಷ್ಮೀ (14) ಆತ್ಮಹತ್ಯೆಗೆ ಶರಣಾದ ಬಾಲಕಿ. ಜಗದೀಶ್ ಎನ್ನುವ ಯುವಕ ಪದೇ ಪದೇ ಪ್ರೀತಿಸು ಎಂದು ಬಾಲಕಿಗೆ ಹಿಂಸೆ ನೀಡುತ್ತಿದ್ದನಂತೆ. ಇದರಿಂದ ಮನನೊಂದು ಬಾಲಕಿ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದಾಳೆ. ಇದನ್ನು ಕಂಡ ಸ್ಥಳೀಯರು ಬಾಲಕಿಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣ ಸಂಬಂಧ ಆರೋಪಿಗಳಾದ ಜಗದೀಶ್ ಮತ್ತು ಆತನ ಅಣ್ಣ ರವಿ ಕುಮಾರ್ ಎಂಬುವವರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.