ದೊಡ್ಡಬಳ್ಳಾಪುರ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕನ ಮೆದುಳು ನಿಷ್ಕ್ರೀಯಗೊಂಡಿತ್ತು. ಹೀಗಾಗಿ ಆತನ ಕುಟುಂಬಸ್ಥರು ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ ಯುವಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಮೂವರ ಬಾಳಿಗೆ ಬೆಳಕಾಗಿದ್ದಾನೆ.
ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟದ ಯುವಕ ಕೀರ್ತಿ (24) ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ. ವಾರದ ಹಿಂದೆ ಈತ ವಿಜಯಪುರದಲ್ಲಿರುವ ಅಕ್ಕನ ಮನೆಗೆ ಬೈಕ್ನಲ್ಲಿ ತೆರಳುತ್ತಿದ್ದ. ಈ ವೇಳೆ ಅಪಘಾತವಾಗಿದೆ. ಗಂಭೀರವಾಗಿ ಗಾಯಗೊಂಡು ನವಚೇತನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋಮಾದಲ್ಲಿದ್ದ ಕೀರ್ತಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ. ಸೋಮವಾರ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ.
ಮಗನ ಸಾವಿನ ದುಃಖದಲ್ಲೂ ಕುಟುಂಬಸ್ಥರು ಆತನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದರು. ಮೃತ ಕೀರ್ತಿಯ ದೇಹದಿಂದ ಕಿಡ್ನಿ, ಹೃದಯ ಮತ್ತು ಕಣ್ಣುಗಳನ್ನು ತೆಗೆಯಲಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಕೀರ್ತಿ ಸ್ನೇಹಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಇದನ್ನೂ ಓದಿ: ಅಪಘಾತದಲ್ಲಿ ಯುವಕನ ಬ್ರೈನ್ ಡೆಡ್; ಅಂಗಾಂಗ ದಾನಕ್ಕೆ ಪೋಷಕರ ನಿರ್ಧಾರ