ETV Bharat / state

ಬೆಂಗಳೂರಿನಲ್ಲಿ ಕಂಬಳ ಸ್ಪರ್ಧೆ ಆಯೋಜಿಸಲು ಭರದ ಸಿದ್ಧತೆ: ಕರಾವಳಿಯ ಜನಪದ ಕ್ರೀಡೆಗೆ 1 ಕೋಟಿ ರೂಪಾಯಿ ಅನುದಾನ- ಡಿ.ಕೆ.ಶಿವಕುಮಾರ್

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶ್ರೀಮಂತ ಜನಪದ ಕ್ರೀಡೆ ಕಂಬಳಕ್ಕೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.

ಡಿಸಿಎಂ ಡಿ.ಕೆ ಶಿವಕುಮಾರ್
ಡಿಸಿಎಂ ಡಿ.ಕೆ ಶಿವಕುಮಾರ್
author img

By ETV Bharat Karnataka Team

Published : Oct 11, 2023, 6:24 PM IST

Updated : Oct 11, 2023, 7:51 PM IST

ಬೆಂಗಳೂರಿನಲ್ಲಿ ಕಂಬಳ ಸ್ಪರ್ಧೆ

ಬೆಂಗಳೂರು : 20 ಕಂಬಳಗಳಿಗೆ ತಲಾ 5 ಲಕ್ಷ ರೂಪಾಯಿಯಂತೆ 1 ಕೋಟಿ ರೂ. ಸಹಾಯಧನವನ್ನು ಈ ಹಿಂದಿನಂತೆ ನೀಡಲಾಗುವುದು. ದೇಸಿ ಹಾಗೂ ಐತಿಹಾಸಿಕ ಕಂಬಳ ಕ್ರೀಡೆಗೆ ಸರ್ಕಾರ ಹೆಚ್ಚಿನ ಸಹಕಾರ ನೀಡಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಇಂದು ಬೆಂಗಳೂರು ಕಂಬಳ-ನಮ್ಮ ಕಂಬಳದ ಕರೆಪೂಜೆ (ಗುದ್ದಲಿ ಪೂಜೆ) ನೆರವೇರಿಸಿ ಮಾತನಾಡಿದ ಅವರು, ಬೆಂಗಳೂರು ಕಂಬಳಕ್ಕೆ ಸಹಾಯಧನ ಬಿಡುಗಡೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಾಜಗಳ ಸಂಘಟನೆಗೆ ಒಂದು ನೆಲೆ ಬೇಕು ಎಂದು ಶಾಸಕ ಅಶೋಕ್ ರೈ ಮನವಿ ಮಾಡಿದ್ದು, ಎಲ್ಲರೂ ಒಟ್ಟಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಎಂದರು.

ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ
ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ

ಮನುಷ್ಯನ ಬಳಿ ತೆಗೆದುಕೊಂಡು ಹೋಗಲು ಏನೂ ಇಲ್ಲ. ತನ್ನ ಬಳಿ ಇರುವುದನ್ನೆಲ್ಲಾ ಬಿಟ್ಟು ಹೋಗಲೇಬೇಕು. ಆದರೆ ನಮ್ಮ ಸಂಸ್ಕೃತಿಯನ್ನು ಉಳಿಸಿ, ಪರಿಚಯಿಸಬೇಕು ಎಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರು ಒಂದಾಗಿರುವುದು ಸಂತೋಷದ ವಿಚಾರ. ಉಳಿಪೆಟ್ಟು ಬೀಳದೆ ಯಾವುದೇ ಶಿಲೆ ಪ್ರತಿಮೆ ಆಗುವುದಿಲ್ಲ. ಭೂಮಿ ಉಳದೆ ಯಾವುದೇ ಬೆಳೆ ಬೆಳೆಯಲು ಆಗುವುದಿಲ್ಲ. ಅದರಂತೆ ಅರಮನೆ ಮೈದಾನದಲ್ಲಿ ಒಂದಷ್ಟು ಅಭಿವೃದ್ದಿ ಕೆಲಸಗಳನ್ನು ಈ ನೆಪದಲ್ಲಿ ಮಾಡಬೇಕು. ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದಂತಹ ಸದಾನಂದ ಗೌಡರು, ಹ್ಯಾರಿಸ್​ ಬೆಂಗಳೂರಿನಲ್ಲಿ ನಾಯಕರಾಗಿ ಬೆಳೆದಿದ್ದಾರೆ.

ಕರ್ನಾಟಕದ ಕರಾವಳಿ ಭಾಗ ಈ ದೇಶದ ದೊಡ್ಡ ಆಸ್ತಿ. ಉದ್ದಿಮೆ, ಶಿಕ್ಷಣ, ಹೋಟೆಲ್ ಉದ್ಯಮ, ಪ್ರವಾಸೋದ್ಯಮ, ಬ್ಯಾಂಕಿಂಗ್ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಹೆಸರು ಮಾಡಿದೆ. ತಮ್ಮ ಸಂಪ್ರದಾಯವನ್ನು ಬೆಂಗಳೂರಿನ ಜನತೆಗೂ ಪರಿಚಯಿಸಲು ಹೊರಟಿರುವ ಅಶೋಕ್ ರೈ ಕೆಲಸ ಶ್ಲಾಘನೀಯ ಎಂದರು.

ಈ ದೇಶಕ್ಕೆ ದೊಡ್ಡ ಆಸ್ತಿಯೇ ನಮ್ಮ ಸಂಸ್ಕೃತಿ. ಅದೇ ರೀತಿ ದಕ್ಷಿಣ ಕನ್ನಡ ಶ್ರೀಮಂತ ಜನಪದ ಆಚರಣೆಗಳನ್ನು ಹೊಂದಿದೆ. ದಕ್ಷಿಣ ಕನ್ನಡದ ಆಚರಣೆ ಬೆಂಗಳೂರಿನಲ್ಲೂ ನಡೆಯಬೇಕು ಎನ್ನುವ ಸಾಕ್ಷಿಗುಡ್ಡೆಯನ್ನು ಬಿಟ್ಟು ಹೋಗಲು ಎಲ್ಲರೂ ಒಗ್ಗಟ್ಟಾಗಿ ಸೇರಿ ಮಾದರಿ ಕೆಲಸ ಮಾಡುತ್ತಿದ್ದೀರಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಯುವಕರು ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದು, ಸಾವಿರಾರು ಯುವಕರು ಬೆಂಗಳೂರಿನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಈ ಐತಿಹಾಸಿಕ ಕಂಬಳ ಆಯೋಜನೆ ಮಾಡುತ್ತಿರುವುದಕ್ಕೆ ನಮ್ಮ ಸಹಕಾರ ಎಂದಿಗೂ ಇರುತ್ತದೆ. ದೇವರು ವರ, ಶಾಪ ಎರಡೂ ನೀಡದೆ ಅವಕಾಶ ನೀಡುತ್ತಾನೆ. ಈ ಅವಕಾಶ ಬಳಸಿಕೊಳ್ಳಿ ಎಂದು ಡಿಕೆಶಿ ಕರೆ ನೀಡಿದರು.

ದಕ್ಷಿಣ ಕನ್ನಡದ ಜನರು ಅವರ ಸಂಸ್ಕೃತಿ ಉಳಿಸಿಕೊಳ್ಳಲು ಬದ್ದತೆಯಿಂದ ಇಲ್ಲಿ ಸೇರಿದ್ದಾರೆ. ನಮ್ಮ ಕಂಬಳ- ಬೆಂಗಳೂರು ಕಂಬಳಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ಸರ್ಕಾರ ನೀಡುತ್ತದೆ. ನಡೆ ಮುಂದೆ, ನಡೆ ಮುಂದೆ ನುಗ್ಗಿ ನಡೆ ಮುಂದೆ ಎಂದು ಮುನ್ನಡೆಯಬೇಕು. ಯಾವುದೇ ಅಡಚಣೆಗಳಿಗೆ ಕುಗ್ಗಬಾರದು ಎಂದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಸದಾನಂದ ಗೌಡ, ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ಶಾಸಕರಾದ ಎನ್​.ಎ.ಹ್ಯಾರಿಸ್, ಅಶೋಕ್ ಕುಮಾರ್ ರೈ, ಕಂಬಳ ಸಮಿತಿಯ ಕನ್ನಡ ಸಂಗೀತ ನಿರ್ದೇಶಕ ಗುರುಕಿರಣ್, ಪ್ರಕಾಶ್ ಶೆಟ್ಟಿ, ಗುಣರಂಜನ್ ಶೆಟ್ಟಿ, ಉಮೇಶ್ ಶೆಟ್ಟಿ, ಕಾಂತರಾಜ್ ಮತ್ತಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯಿದೆ ವಾಪಸ್​ ಬೇಡ: ಸಿಎಂಗೆ ಪ್ರಭು ಚೌಹಾಣ್ ಮನವಿ

Last Updated : Oct 11, 2023, 7:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.