ETV Bharat / state

ಪತಿ - ಪತ್ನಿ ವೃತ್ತಿಯ ಬಗ್ಗೆ ಗಮನ ಹರಿಸಲು ನಿರ್ಧರಿಸಿದಲ್ಲಿ ವಿಚ್ಛೇದನಕ್ಕೆ 1 ವರ್ಷ ಕಡ್ಡಾಯವಲ್ಲ: ಹೈಕೋರ್ಟ್ - ಈಟಿವಿ ಭಾರತ್ ಕನ್ನಡ ಸುದ್ದಿ

ವೃತ್ತಿಯ ಬಗ್ಗೆ ಗಮನಹರಿಸಿ ಪತಿ - ಪತ್ನಿ ಪರಸ್ಪರ ದೂರವಿರಲು ನಿರ್ಧರಿಸಿದ್ದಲ್ಲಿ ವಿಚ್ಛೇದನಕ್ಕೆ ಒಂದು ವರ್ಷದ ಅವಧಿ ಕಡ್ಡಾಯವಲ್ಲ ಎಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ.

ಹೈಕೋರ್ಟ್
ಹೈಕೋರ್ಟ್
author img

By ETV Bharat Karnataka Team

Published : Sep 6, 2023, 10:39 PM IST

ಬೆಂಗಳೂರು : ವೃತ್ತಿಯ ಬಗ್ಗೆ ಗಮನ ಹರಿಸಲು ತೀರ್ಮಾನಿಸಿ ದಂಪತಿ ಪರಸ್ಪರ ದೂರವಿರಲು ನಿರ್ಧರಿಸಿದ್ದಲ್ಲಿ ವಿಚ್ಛೇದನಕ್ಕೆ ಒಂದು ವರ್ಷದ ಕಡ್ಡಾಯ ಅವಧಿ ಪರಿಗಣಿಸಲಾಗದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ, ದಂಪತಿ ಸಲ್ಲಿಸಿರುವ ಅರ್ಜಿಯನ್ನು ಶೀಘ್ರದಲ್ಲಿ ಪರಿಗಣಿಸಿ ಸೂಕ್ತ ಆದೇಶವನ್ನು ನೀಡಬೇಕು ಎಂದು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ ನರೇಂದರ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ ಪಾಟೀಲ್ ಅವರಿದ್ದ ವಿಭಾಗೀಯಪೀಠ, ವಿಚ್ಚೇದನ ಮಂಜೂರಾತಿಗೆ ನಿರಾಕರಿಸಿ ಅರ್ಜಿ ವಜಾಗೊಳಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಪಡಿಸಿ ಆದೇಶಿಸಿದೆ. ಪ್ರಸ್ತುತ ಪ್ರಕರಣದ ಅರ್ಜಿದಾರರು 32 ರಿಂದ 37 ವರ್ಷದ ವಯೋಮಾನದವರು. ಅವರಿಬ್ಬರೂ ನಿರ್ದಿಷ್ಟವಾಗಿ ಪರಸ್ಪರ ದೂರ ಸರಿದು ತಮ್ಮ ತಮ್ಮ ವೃತ್ತಿಜೀವನದ ಮೇಲೆ ಹೆಚ್ಚಿನ ಗಮನಹರಿಸಲು ಮತ್ತು ಪ್ರತ್ಯೇಕ ಜೀವನ ನಡೆಸಲು ಇಚ್ಚಿಸಿದ್ದಾರೆ.

ಅವರು ಕೈಗೊಂಡಿರುವ ನಿರ್ಧಾರ ಪ್ರಜ್ಞಾಪೂರ್ವಕವಾದುದು ಮತ್ತು ಆ ನಿರ್ಧಾರದ ಪರಿಣಾಮಗಳ ಬಗ್ಗೆ ಅವರಿಗೆ ಅರಿವಿದೆ. ಹಾಗಾಗಿ ಈ ಮೇಲಿನ ಪರಿಸ್ಥಿತಿ ಮತ್ತು ಸಂದರ್ಭದ ಹಿನ್ನೆಲೆಯಲ್ಲಿ ಈ ಕೋರ್ಟ್‌ಗೆ ಅವರಿಬ್ಬರ ನಡುವಿನ ಸಂಧಾನ ಸಾಧ್ಯತೆ ಕ್ಷೀಣಿಸುತ್ತಿದೆ ಎಂದು ನ್ಯಾಯಪೀಠ ಹೇಳಿದೆ.

ಅಲ್ಲದೇ ನಿಯಮದ ಪ್ರಕಾರ, ಅರ್ಜಿ ಸಲ್ಲಿಸಿದ ಆರು ತಿಂಗಳು ಸಮಯ ನೀಡುವುದು (ಕೂಲಿಂಗ್ ಅವಧಿ) ಕೋರ್ಟ್ ಮೆಟ್ಟಿಲೇರಿರುವ ಪತಿ-ಪತ್ನಿ ಮನಸು ಬದಲಾವಣೆಯಾಗಬಹುದು. ಆರು ತಿಂಗಳ ನಂತರವೂ ಪತಿ-ಪತ್ನಿ ಇಬ್ಬರೂ ಮನಸು ಬದಲಿಸದೇ, ವಿಚ್ಚೇದನ ಅರ್ಜಿಯನ್ನು ಮುಂದುವರಿಸಲು ಸಮ್ಮತಿಸಿದರೆ, ಆಗ ನ್ಯಾಯಾಲಯ ಮುಂದಿನ ಆರು ತಿಂಗಳಲ್ಲಿ ಮೆರಿಟ್ ಆಧಾರದ ಮೇಲೆ ಅರ್ಜಿ ಪರಿಶೀಲಿಸಿ, ಅಗತ್ಯ ಆದೇಶಗಳನ್ನು ಹೊರಡಿಸುತ್ತದೆ. ಆದರೆ, ಸುಪ್ರೀಂಕೋರ್ಟ್ 2017 ರಲ್ಲಿ ಅಮರ್ ದೀಪ್ ಸಿಂಗ್ ವರ್ಸಸ್ ಹರ್ವೀನ್ ಕೌರ್ ಪ್ರಕರಣದಲ್ಲಿ ಕೂಲಿಂಗ್ ಅವಧಿ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿರುವುದಾಗಿ ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

ಆದ್ದರಿಂದ, ವಿಚ್ಚೇದನ ಮಂಜೂರು ಮಾಡುವಾಗ ಪ್ರಕರಣಗಳ ವಾಸ್ತವಾಂಶ ಹಾಗೂ ಸಂದರ್ಭಗಳಿಗೆ ಅನುಗುಣವಾಗಿ ನ್ಯಾಯಾಲಯಗಳು ವಿವೇಚನೆ ಬಳಸಬೇಕು ಮತ್ತು ಪಕ್ಷಗಾರರನ್ನು ಮತ್ತೆ ಒಂದುಗೂಡಿ ಸಂಸಾರ ನಡೆಸುತ್ತಾರೆಯೇ? ಎಂದು ಕೇಳಬೇಕು. ಅವರು ಒಪ್ಪಲಿಲ್ಲ ಎಂದಾದರೆ ವಿಚ್ಚೇದನ ಮಂಜೂರು ಮಾಡಬಹುದು ಎಂದು ನ್ಯಾಯಪೀಠ ವಿವರಿಸಿದೆ.

ಈ ಪ್ರಕರಣದಲ್ಲಿ ಪತಿ-ಪತ್ನಿ ಇಬ್ಬರೂ ಎಂಜಿನಿಯರಿಂಗ್ ಪದವೀಧರರು, ಇಬ್ಬರೂ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇಬ್ಬರಿಗೂ ತಮ್ಮ ನಡುವಿನ ಪರಸ್ಪರ ಭಿನ್ನಾಭಿಪ್ರಾಯಗಳು, ಇಷ್ಟ, ಕಷ್ಟಗಳು ಅರ್ಥವಾಗಿವೆ. ಸಂಧಾನಕ್ಕೆ ಮಾಡಿರುವ ಯತ್ನಗಳು ವಿಫಲವಾಗಿವೆ. ಇಬ್ಬರೂ ಪರಸ್ಪರ ಯಾವುದೇ ಆರೋಪ-ಪ್ರತ್ಯಾರೋಪಗಳನ್ನು ಮಾಡದೆ ವಿವಾಹ ಬಂಧನ ಕಡಿದುಕೊಳ್ಳಲು ನಿರ್ಧರಿಸಿದ್ದಾರೆ.

ಆದ್ದರಿಂದ ಅವರನ್ನು ಮತ್ತಷ್ಟು ಅವಧಿಗೆ ಕಾಯಿಸುವುದು ಸರಿಯಲ್ಲ. ನ್ಯಾಯಾಲಯ ಈ ಪ್ರಕರಣದಲ್ಲಿ ಅರ್ಜಿದಾರರ ಪರಸ್ಪರ ಒಪ್ಪಿಗೆ ಮೇರೆಗೆ ಕೂಲಿಂಗ್ ಅವಧಿ ಮನ್ನಾ ಮಾಡಲಾಗುವುದು ಎಂದು ನ್ಯಾಯಪೀಠ ತಿಳಿಸಿದೆ.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ಭಾನುವಾರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪೀಠದಲ್ಲಿ ಕಲಾಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.