ETV Bharat / state

ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ 10 ಕ್ರಯೋಜೆನಿಕ್ ಆಕ್ಸಿಜನ್ ಟ್ಯಾಂಕರ್ ನೀಡಲು ನಿರ್ಧಾರ: ಸಚಿವ ನಿರಾಣಿ - ಆಮ್ಲಜನಕ ಉತ್ಪಾದನಾ ಘಟಕ

ಪ್ರತಿ ನಾಲ್ಕು ಕಂದಾಯ ವಿಭಾಗಗಳಿಗೆ 2 ಆಸ್ಪತ್ರೆ, ಕರಾವಳಿ ಪ್ರದೇಶದ 2 ಆಸ್ಪತ್ರೆಗಳಿಗೆ ಆಮ್ಲಜನಕ ಉತ್ಪಾದನಾ ಘಟಕಗಳನ್ನು ನೀಡಲು ಸಚಿವ ಮುರುಗೇಶ್ ನಿರಾಣಿ ಸೂಚಿಸಿದ್ದಾರೆ.

meeting
meeting
author img

By

Published : May 15, 2021, 7:43 PM IST

ಬೆಂಗಳೂರು: ಕೋವಿಡ್ -19 ಎರಡನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಸೋಂಕಿತರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಗತ್ಯ ಇರುವ ಸೌಲಭ್ಯಗಳನ್ನು ಕಲ್ಪಿಸಲು ನಿರ್ಧರಿಸಿದೆ.

ವಿಕಾಸಸೌಧದಲ್ಲಿ ಈ ಸಂಬಂಧ ಮಾತನಾಡಿದ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕ ಪಿ.ಆರ್ ರವೀಂದ್ರ ಸೇರಿದಂತೆ ಮತ್ತಿತರ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಯಿತು. ಪ್ರಮುಖವಾಗಿ 10 ಕ್ರಯೋಜೆನಿಕ್ ಆಮ್ಲಜನಕ ಟ್ಯಾಂಕರ್​ಗಳನ್ನು ಪ್ರತಿ ನಾಲ್ಕು ಕಂದಾಯ ವಿಭಾಗಗಳಿಗೆ ತಲಾ 2 ಟ್ಯಾಂಕರ್‌ಗಳನ್ನು ನೀಡಲು ಸಚಿವರು ಸೂಚನೆ ನೀಡಿದರು.

ಇದರಲ್ಲಿ ಕರಾವಳಿ ಪ್ರದೇಶಕ್ಕೆ 2 ಟ್ಯಾಂಕರ್​ಗಳನ್ನು ನೀಡಲಾಗುವುದು. ಇದರ ಜವಾಬ್ದಾರಿಯನ್ನು ಪ್ರಾದೇಶಿಕ ಆಯುಕ್ತರಿಗೆ ನೀಡಲಾಗಿದೆ. ಇದರ ಜೊತೆಗೆ 10 ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಅಳವಡಿಸಲಾಗುತ್ತದೆ. ಪ್ರತಿ ನಾಲ್ಕು ಕಂದಾಯ ವಿಭಾಗಗಳಿಗೆ 2 ಆಸ್ಪತ್ರೆ, ಕರಾವಳಿ ಪ್ರದೇಶಕ್ಕೆ 2 ಆಸ್ಪತ್ರೆಗಳಿಗೆ ಆಮ್ಲಜನಕ ಉತ್ಪಾದನಾ ಘಟಕಗಳನ್ನು ನೀಡಲು ಸಚಿವರು ಸೂಚನೆ ನೀಡಿದರು. ಆರೋಗ್ಯ ಇಲಾಖೆಯೊಂದಿಗೆ ಸಮಾಲೋಚಿಸಿ ಗಣಿ ಮತ್ತು ಭೂವಿಜ್ಞಾನ ವಿಭಾಗದ ಸಮಿತಿಯು ಆಸ್ಪತ್ರೆ ಗುರುತಿಸುವ ಹೊಣೆಗಾರಿಕೆ ಸಭೆ ನೀಡಿದೆ.

ಇನ್ನು ಗಣಿ ಇಲಾಖೆಯಿಂದ 1000 ಆಮ್ಲಜನಕ ಸಾಂದ್ರಕಗಳನ್ನು ಸಂಗ್ರಹಿಸಿ ಅವುಗಳನ್ನು ಎಲ್ಲ ಜಿಲ್ಲೆಗಳಿಗೆ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು. ಹೆಚ್ಚಿನ ಸಂಖ್ಯೆಯ ಆಕ್ಸಿಮೀಟರ್‌ಗಳನ್ನು ಸಂಗ್ರಹಿಸಿ ಇವುಗಳನ್ನು ಗ್ರಾಮ ಪಂಚಾಯಿತಿ ಆರೋಗ್ಯ ಸಮಿತಿಗಳಿಗೆ ನೀಡಲಾಗುವುದು. ಇದನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೀಡಿದರೆ, ಗ್ರಾಮಸ್ಥರಿಗೆ ಆಮ್ಲಜನಕದ ಶುದ್ಧತ್ವವನ್ನು ನಿಯಮಿತವಾಗಿ ಪರಿಶೀಲಿಸಬಹುದು ಎಂದು ನಿರಾಣಿ ಸಲಹೆ ಮಾಡಿದರು.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನಲ್ಲಿರುವ ಹಟ್ಟಿ ಗೋಲ್ಡ್ ಮೈನ್ಸ್ ಕ್ಯಾಂಪಸ್ ಆಸ್ಪತ್ರೆಯಲ್ಲಿ ನರ್ಸಿಂಗ್ ಕಾಲೇಜು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಇದರಿಂದ ರಾಯಚೂರು ಜಿಲ್ಲೆಯ ಪ್ಯಾರಾ - ಮೆಡಿಸಿನ್ ಮತ್ತು ದಾದಿಯರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಈ ಆಸ್ಪತ್ರೆಯಲ್ಲಿ ವಿಶೇಷ ಆಮ್ಲಜನಕ ಜನರೇಟರ್ ಸ್ಥಾವರವನ್ನು ಸ್ಥಾಪಿಸಲು ನಿರಾಣಿ ಸೂಚಿಸಿದರು.

ಯಾವ ಯಾವ ಜಿಲ್ಲೆಗಳಲ್ಲಿ ಅಗತ್ಯ ಸೌಲಭ್ಯಗಳ ಕೊರತೆ ಇದೆಯೋ ಅಂತಹ ಕಡೆ ಮೊದಲ ಆದ್ಯತೆಯಾಗಿ ಹೆಚ್ಚಿನ ಗಮನ ಹರಿಸಬೇಕು. ಸೋಂಕಿತರ ಪ್ರಾಣ ರಕ್ಷಣೆಗೆ ಇಲಾಖೆ ವತಿಯಿಂದ ಎಲ್ಲ ಕ್ರಮಗಳನ್ನು ತೆಗೆದುಕೊಳುವಂತೆ ಹೇಳಿದರು. ಹೆಚ್ಚು ಸೋಂಕು ಇರುವ ಜಿಲ್ಲೆಗಳಿಗೆ 'ವಿಶೇಷ ಗಮನ' ನೀಡಬೇಕು. ಇಲಾಖೆ ವತಿಯಿಂದ ಏನೇನು ಸೌಲಭ್ಯ ಕಲ್ಪಿಸಲು ಸಾಧ್ಯವಿದೆಯೋ ಅವೆಲ್ಲವನ್ನೂ ಮಾಡಿಕೊಡಬೇಕೆಂದು ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.