ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾಗವಹಿಸಲು ರಾಜ್ಯದಿಂದ ಆಯ್ಕೆಯಾಗಿರುವ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಿ ಮತ್ತು ಅವರ ಕುಟುಂಬದವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸನ್ಮಾನಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾಗೆ ಜುಲೈ 23ರಿಂದ ಸೆಪ್ಟೆಂಬರ್ 5ರ ವರೆಗೆ ಒಲಿಂಪಿಕ್ ಕ್ರೀಡಾಕೂಟಕ್ಕೆ ತೆರಳುವ ರಾಜ್ಯದ ಮೂವರು ಕ್ರೀಡಾಪಟುಗಳನ್ನು ಕರೆಸಿಕೊಂಡ ಸರ್ಕಾರದ ಪರವಾಗಿ ಸನ್ಮಾನಿಸಿ ತಲಾ 10 ಲಕ್ಷ ರೂ. ಪ್ರೋತ್ಸಾಹಧನ ನೀಡಿದರು.
ಟೋಕಿಯೋ ಒಲಿಂಪಿಕ್ಸ್ಗೆ ಆಯ್ಕೆಯಾಗಿರುವ ಈಕ್ವೆಸ್ಟ್ರಿಯನ್ ಕ್ರೀಡಾಪಟು ಪೌವಾದ್ ಮಿರ್ಜಾ, ಈಜುಪಟು ಶ್ರೀಹರಿ ನಟರಾಜ್ ಮತ್ತು ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಪ್ರೋತ್ಸಾಹಧನ ಸ್ವೀಕರಿಸಿ ಉತ್ತಮ ಸಾಧನೆ ತೋರುವ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕೆಆರ್ಎಸ್ ಡ್ಯಾಂ ಬಿರುಕು ಹೇಳಿಕೆ: ಸುಮಲತಾ ವಿರುದ್ಧ ಸಚಿವ ಅಶೋಕ್ ಸಿಡಿಮಿಡಿ