ETV Bharat / state

ಒಲಂಪಿಕ್​​ಗೆ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹ ಧನ!

ಐವರೂ ಕ್ರೀಡಾಪಟುಗಳು ರಾಜ್ಯದ, ರಾಷ್ಟ್ರದ ಕೀರ್ತಿಪತಾಕೆಯನ್ನು ಜಪಾನ್​ನ ಟೋಕಿಯೋದಲ್ಲಿ ಹಾರಿಸಲಿ ಎಂದು ಶುಭ ಹಾರೈಸಿದರು. ಮತ್ತಷ್ಟು ಕಠಿಣ ಶ್ರಮವಹಿಸಿ ಒಲಂಪಿಕ್​​ನಲ್ಲಿ ಪಾಲ್ಗೊಳ್ಳಬೇಕು‌. ಆದ್ದರಿಂದ ತಲಾ ರೂ. 10 ಲಕ್ಷ ನೀಡಿ ಪ್ರೋತ್ಸಾಹಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂತೆಯೇ ರಾಜ್ಯ ಸರ್ಕಾರ ಕರ್ನಾಟಕದ ಕ್ರೀಡಾ ಪ್ರೋತ್ಸಾಹ ಧನ ಘೋಷಿಸಿ ಆದೇಶಿಸಿದೆ..

MINISTER NARAYANGOWDA ANNOUNCING 10LAKS TO OLYMPIC SELECTED CANDIDIATES OF KARANATAKA

author img

By

Published : Jun 26, 2021, 4:25 PM IST

Updated : Jun 26, 2021, 4:38 PM IST

ಬೆಂಗಳೂರು : ಒಲಂಪಿಕ್​ಗೆ ರಾಜ್ಯದಿಂದ ಆಯ್ಕೆಯಾಗುವ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹ ಧನ ಘೋಷಿಸಿ ಆದೇಶ ಹೊರಡಿಸಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಟೋಕಿಯೋ ಒಲಂಪಿಕ್​ಗೆ ರಾಜ್ಯದ ಐವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 2020ರ ಒಲಂಪಿಕ್ ಕ್ರೀಡಾಕೂಟವು ಜಪಾನ್‌ನ ಟೋಕಿಯೋದಲ್ಲಿ ಜುಲೈ 23ರಿಂದ ಸೆಪ್ಟಂಬರ್ 5ರವರೆಗೆ ನಡೆಯಲಿದೆ.

ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡುವುದು ಸರ್ಕಾರದ ಕರ್ತವ್ಯ‌. ಮೂಲಸೌಕರ್ಯದ ಜೊತೆಗೆ ಆರ್ಥಿಕ ಸಹಾಯ ನೀಡುವುದು ಅತ್ಯಗತ್ಯ. ಭಾರತ ಸರ್ಕಾರ ಒಲಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ನಮ್ಮ ದೇಶದ ಅರ್ಹ ಕ್ರೀಡಾಪಟುಗಳ ಸಂಭವನೀಯ ಪಟ್ಟಿಯನ್ನು ಸಿದ್ಧಪಡಿಸಿದೆ‌.

narayanagowda
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ

ರಾಜ್ಯದ ಈಕ್ವೆಸ್ಟ್ರಿಯನ್ ಕ್ರೀಡಾಪಟು ಒಲಂಪಿಕ್​ಗೆ ಆಯ್ಕೆಯಾಗಿದ್ದಾರೆ. ರಾಜ್ಯದ ಇನ್ನೂ ನಾಲ್ವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ, ಅವರಿಗೆ ಪ್ರೋತ್ಸಾಹ ಧನ ನೀಡಿ ಬೆಂಬಲಿಸಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ‌. ಐವರೂ ಕ್ರೀಡಾಪಟುಗಳು ರಾಜ್ಯದ, ರಾಷ್ಟ್ರದ ಕೀರ್ತಿಪತಾಕೆಯನ್ನು ಜಪಾನ್​ನ ಟೋಕಿಯೋದಲ್ಲಿ ಹಾರಿಸಲಿ ಎಂದು ಶುಭ ಹಾರೈಸಿದರು.

ಮತ್ತಷ್ಟು ಕಠಿಣ ಶ್ರಮವಹಿಸಿ ಒಲಂಪಿಕ್​​ನಲ್ಲಿ ಪಾಲ್ಗೊಳ್ಳಬೇಕು‌. ಆದ್ದರಿಂದ ತಲಾ ರೂ. 10 ಲಕ್ಷ ನೀಡಿ ಪ್ರೋತ್ಸಾಹಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂತೆಯೇ ರಾಜ್ಯ ಸರ್ಕಾರ ಕರ್ನಾಟಕದ ಕ್ರೀಡಾ ಪ್ರೋತ್ಸಾಹ ಧನ ಘೋಷಿಸಿ ಆದೇಶಿಸಿದೆ ಎಂದರು.

ಇದನ್ನೂ ಓದಿ: ಕ್ರೀಡಾಭಿಮಾನಿಗಳಿಗೆ ಗುಡ್​ನ್ಯೂಸ್​.. ಐಸಿಸಿ ಟಿ - 20 ವಿಶ್ವಕಪ್​ ಕ್ರಿಕೆಟ್​ಗೆ ಮುಹೂರ್ತ್​ ಫಿಕ್ಸ್​​!

ಕ್ರೀಡಾಕೂಟದಲ್ಲಿ ಭಾರತ ತಂಡದ ಪರವಾಗಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪೂರ್ವ ತಯಾರಿ ಮತ್ತು ಬೆಂಬಲದ ದ್ಯೋತಕವಾಗಿ ತಮಿಳುನಾಡು ಮತ್ತು ಮಧ್ಯಪ್ರದೇಶ ರಾಜ್ಯಗಳು ತಲಾ ರೂ.10 ಲಕ್ಷ ಪ್ರೋತ್ಸಾಹ ಧನ ನೀಡಿವೆ. ಅದೇ ರೀತಿ ಕರ್ನಾಟಕ ಸಹ ಕ್ರೀಡಾಪಟುಗಳಿಗೆ ನಗದು ಪ್ರೋತ್ಸಾಹಧನ ನೀಡುವ ಸಂಬಂಧ ನಡೆದ ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆಯುಕ್ತ ಡಾ. ಗೋಪಾಲಕೃಷ್ಣ ಹಾಗೂ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಆಯ್ಕೆಯಾಗಿರುವ ಹಾಗೂ ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದ ಕ್ರೀಡಾಪಟುಗಳು:

  • ಪೌವಾದ್ ಮಿರ್ಜಾ - ಈಕ್ವೆಸ್ಟ್ರಿಯನ್ - ಆಯ್ಕೆಯಾಗಿದ್ದಾರೆ
  • ಎಸ್.ವಿ. ಸುನೀಲ್ - ಹಾಕಿ - ಸಂಭವನೀಯ
  • ರೋಹನ್ ಬೋಪಣ್ಣ - ಟೆನ್ನಿಸ್ - ಸಂಭವನೀಯ
  • ಶ್ರೀಹರಿ ನಟರಾಜ್ - ಈಜು - ಸಂಭವನೀಯ
  • ಕುಮಾರಿ ಅದಿತಿ ಅಶೋಕ್ - ಗಾಲ್ಫ್ -ಸಂಭವನೀಯ

Last Updated : Jun 26, 2021, 4:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.