ಬೆಂಗಳೂರು: ಒಟ್ಟು ಹತ್ತು ಮಂದಿಯಲ್ಲಿ ರೂಪಾಂತರಿ ವೈರಸ್ ದೃಢವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಪೈಕಿ ಹತ್ತು ಮಂದಿಯಲ್ಲಿ ರೂಪಾಂತರಿ ವೈರಸ್ ದೃಢಪಟ್ಟಿದೆ. ಸೋಂಕಿತರಲ್ಲಿ ಯಾರಿಗೂ ರೋಗದ ಲಕ್ಷಣ ಉಲ್ಬಣಿಸಿಲ್ಲ. ಇದು ಸಮಾಧಾನಕರ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.
ಕೊರೊನಾ ಲಸಿಕೆಯ ಡ್ರೈ ರನ್ ಎಲ್ಲೆಡೆ ನಡೆಯುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದು ಸಚಿವರು ಹೇಳಿದರು.