ಬೆಂಗಳೂರು: ನಿನ್ನೆ ಪಟಾಕಿ ಸಿಡಿಸಲು ಹೋಗಿ ಸುಮಾರು 10 ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ದೀಪಾವಳಿ ಹಬ್ಬದಲ್ಲಿ ಪಟಾಕಿಯಿಂದ ಸೃಷ್ಟಿಯಾಗೋ ಸಮಸ್ಯೆ ಅಷ್ಟಿಷ್ಟಲ್ಲ. ಈ ಬಾರಿಯೂ ಅಂತಹ ಪ್ರಕರಣಗಳು ವರದಿಯಾಗಿವೆ. ಕೋವಿಡ್ ಹಿನ್ನೆಲೆ ರಾಜ್ಯ ಸರ್ಕಾರ ಮಾರ್ಗಸೂಚಿಗಳೊಂದಿಗೆ ಹಸಿರು ಪಟಾಕಿ ಸಿಡಿಸಲು ಅವಕಾಶ ನೀಡಿದೆ. ಆದ್ರೆ ಹಾನಿ ಮಾತ್ರ ತಪ್ಪಿಲ್ಲ. ನಿನ್ನೆ ಸುಮಾರು 10 ಜನರಿಗೆ ಗಾಯವಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಿಂಟೋ ಆಸ್ಪತ್ರೆಯಲ್ಲಿ ಒಬ್ಬರು, ನಾರಾಯಣ ಆಸ್ಪತ್ರೆಯಲ್ಲಿ ನಾಲ್ಕು ಮಂದಿ, ನೇತ್ರಧಾಮದಲ್ಲಿ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ನಾಲ್ವರಿಗೆ ತೀವ್ರ ಗಾಯಗಳಾಗಿವೆ. ವಿಜಯನಂದ ನಗರದ 12 ವರ್ಷದ ಬಾಲಕನಿಗೆ ಫ್ಲವರ್ ಪಾಟ್ ಪಟಾಕಿಯಿಂದ ಕಣ್ಣಿನಿಗೆ ಹಾನಿಯಾಗಿದ್ದು, ಮಿಂಟೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.