ETV Bharat / state

ಬೆಂಗಳೂರು: ಅಪ್ರಾಪ್ತೆಗೆ ಬೆದರಿಸಿ ಅತ್ಯಾಚಾರ ಎಸಗಿದವನಿಗೆ 10 ವರ್ಷ ಜೈಲು ಶಿಕ್ಷೆ - banashankari girl rape case

ಅಪ್ರಾಪ್ತೆಗೆ ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ್ದ ಆರೋಪಿಗೆ ಹತ್ತು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.

10-year-jail-term-for-minor-rape-case-accused
ಬೆಂಗಳೂರು: ಅಪ್ರಾಪ್ತೆಗೆ ಬೆದರಿಸಿ ಅತ್ಯಾಚಾರ ಎಸಗಿದವನಿಗೆ 10 ವರ್ಷ ಜೈಲು ಶಿಕ್ಷೆ
author img

By

Published : Jun 24, 2022, 10:44 PM IST

ಬೆಂಗಳೂರು: ಅಪ್ರಾಪ್ತೆಗೆ ಬೆದರಿಸಿ ಅತ್ಯಾಚಾರವೆಸಗಿದ್ದ ಆರೋಪಿಗೆ ಹತ್ತು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಬನಶಂಕರಿಯ ಇಟ್ಟಮಡುವು ನಿವಾಸಿ ಬಾಬು ಅಲಿಯಾಸ್ ಚಿಟ್ಟಿ ಬಾಬು ಶಿಕ್ಷೆಗೊಳಗಾದ ಆರೋಪಿ.

ಮದುವೆಯಾಗಿ ಎರಡು ಮಕ್ಕಳ ತಂದೆಯಾಗಿದ್ದ ಆರೋಪಿ 2018ರಲ್ಲಿ 17 ವರ್ಷದ ಬಾಲಕಿಗೆ 'ನಿಮ್ಮ ಮನೆಯವರನ್ನು ಕೊಲ್ಲುತ್ತೇನೆಂದು' ಬೆದರಿಸಿ ಅತ್ಯಾಚಾರವೆಸಗಿದ್ದ. ಘಟನೆಯ ಸಂಬಂಧ 2018ರಲ್ಲಿ ಜಯನಗರ ಪೊಲೀಸ್ ಠಾಣೆಯಲ್ಲಿ‌ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ 3ನೇ ಎಫ್​ಟಿಎಸ್​ಸಿ (ಫಾಸ್ಟ್ ಟ್ರ್ಯಾಕ್ ಸ್ಪೆಷಲ್ ಕೋರ್ಟ್) ನ್ಯಾಯಾಧೀಶರಾದ ಇಶ್ರತ್ ಜಹಾನ್ ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಇದನ್ನೂ ಓದಿ: ಕುಡಿತಕ್ಕೆ ಹಣ ನೀಡಿಲ್ಲವೆಂದು ವ್ಯಕ್ತಿ ಕೊಂದವರ ಬಂಧನ: ಚಪ್ಪಲಿ ನೀಡಿತು ಹಂತಕರ ಸುಳಿವು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.