ETV Bharat / state

ರಾಜ್ಯದಲ್ಲಿ 1000 ವಿದ್ಯುತ್ ದ್ವಿಚಕ್ರ ವಾಹನಗಳ ಚಾರ್ಜಿಂಗ್ ಪಾಯಿಂಟ್: ಎಥರ್, ಎಸ್ಕಾಂ ಒಡಂಬಡಿಕೆ - 1000 Charging point for electric two-wheelers in the state

ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಎಥರ್ ಎನರ್ಜಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ತರುಣ್ ಮೆಹ್ತಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್​​​, ವಿದ್ಯುತ್ ದ್ವಿಚಕ್ರ ವಾಹನಗಳ ಸಾವಿರ ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸುವ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

Ether, Escom Treaty
ಎಥರ್, ಎಸ್ಕಾಂ ಒಡಂಬಡಿಕೆ
author img

By

Published : Feb 3, 2022, 6:21 PM IST

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದ್ವಿಚಕ್ರ ವಾಹನಗಳ ಸಾವಿರ ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಎಥರ್ ಎನರ್ಜಿ ಮತ್ತು ಎಸ್ಕಾಂ, ಸಿಎಂ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದವು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ, ಎಥರ್ ಮತ್ತು ಎಸ್ಕಾಂ ಒಪ್ಪಂದಕ್ಕೆ ಸಹಮತ ವ್ಯಕ್ತಪಡಿಸಿವೆ. ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಎಥರ್ ಎನರ್ಜಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ತರುಣ್ ಮೆಹ್ತಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಈ ಒಪ್ಪಂದಕ್ಕೆ ಸಹಿ ಮಾಡಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ

ಈ ಚಾರ್ಜಿಂಗ್ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂ ನೀಡಲಿದ್ದು, ಸರ್ಕಾರಿ ಸಂಸ್ಥೆಗಳು ಈ ಸೌಲಭ್ಯ ಸ್ಥಾಪನೆಗೆ ಸ್ಥಳಾವಕಾಶ ಒದಗಿಸಲು ಎಸ್ಕಾಂದೊಂದಿಗೆ ಸಮನ್ವಯ ವಹಿಸಲಿವೆ. ಎಥರ್ ಎನರ್ಜಿ ಕಂಪನಿಯು ವಿದ್ಯುತ್ ದ್ವಿಚಕ್ರ ವಾಹನಗಳಿಗೆ ಉಚಿತವಾಗಿ ಚಾರ್ಜಿಂಗ್ ಸೌಲಭ್ಯಗಳನ್ನು ಕಲ್ಪಿಸಲಿವೆ.

ಇದನ್ನೂ ಓದಿ: ಸೋಮವಾರ ದೆಹಲಿಗೆ ಸಿಎಂ ಪ್ರವಾಸ; ಸಚಿವಾಕಾಂಕ್ಷಿಗಳ ಚಿತ್ತ ವರಿಷ್ಠರತ್ತ..

ಒಡಂಬಡಿಕೆ ವೇಳೆ ಶಾಸಕ ಅರವಿಂದ ಬೆಲ್ಲದ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.