ETV Bharat / state

3 ವಲಯಗಳ 11 ಒತ್ತುವರಿ ತೆರವು ಕಾರ್ಯಾಚರಣೆ ಪೂರ್ಣ : ಬಿಬಿಎಂಪಿ - Clearance of encroachment in Yalahanka zone

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಮುಂದುವರೆದಿದ್ದು,ಇದುವರೆಗೆ 3 ವಲಯಗಳ 11 ಒತ್ತುವರಿ ತೆರವು ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಬಿಬಿಎಂಪಿ ತಿಳಿಸಿದೆ.

11-rajakaluve-encroachment-cleared-in-3-zones-said-bbmp
3 ವಲಯಗಳ 11 ಒತ್ತುವರಿ ತೆರವು ಕಾರ್ಯಾಚರಣೆ ಪೂರ್ಣ : ಬಿಬಿಎಂಪಿ
author img

By

Published : Sep 14, 2022, 9:24 PM IST

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆಯ ಒತ್ತುವರಿಗಳ ತೆರವು ಕಾರ್ಯಾಚರಣೆ ಸಕ್ರಿಯವಾಗಿ ನಡೆಯುತ್ತಿದ್ದು, ಇಂದು ಯಲಹಂಕ, ಪಶ್ಚಿಮ ಹಾಗೂ ಮಹದೇವಪುರ ವಲಯ ಸೇರಿದಂತೆ ಒಟ್ಟು 11 ಕಡೆಯ ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ ಎಂದು ಪಾಲಿಕೆ ತಿಳಿಸಿದೆ.

ಯಲಹಂಕ ವಲಯದಲ್ಲಿ ಒತ್ತುವರಿ ತೆರವು : ಯಲಹಂಕ ವಲಯದಲ್ಲಿ 4 ಒತ್ತುವರಿಗಳನ್ನು ತೆರವುಗೊಳಿಸಿದ್ದು, ಈ ಪೈಕಿ ಕುವೆಂಪು ನಗರ ವಾರ್ಡ್ ಸಿಂಗಾಪುರ ವ್ಯಾಪ್ತಿಯಲ್ಲಿ ಇಂದು ಸರ್ವೆ ಸಂ. 81 ಹಾಗೂ 82ರಲ್ಲಿ ಬರುವ ಬಾಲನ್ ಆಗ್ರೋ ಪ್ರಾಡಕ್ಟ್ ಲಿ. ಸಂಸ್ಥೆಯ ಜ್ಯೂಸ್ ಪ್ಯಾಕ್ಟರಿಯು ಸುಮಾರು 21 ಮೀಟರ್ ಅಗಲ, 65 ಮೀಟರ್ ಉದ್ದದ ಜಾಗವನ್ನು ಒತ್ತುವರಿ ಮಾಡಿಕೊಂಡಿತ್ತು.

ಇದರ ತೆರವು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಒತ್ತುವರಿ ಸ್ಥಳದಲ್ಲಿ ಟ್ರಾನ್ಸ್ಫಾರ್ಮರ್ ಸೇರಿದಂತೆ ಕೆಲ ಸಂಗ್ರಹ ವಸ್ತುಗಳನ್ನು ತೆರವುಗೊಳಿಸಬೇಕಿದ್ದು, ಅದನ್ನು ಕೂಡಲೆ ಸ್ಥಳಾಂತರಿಸುವಂತೆ ಜ್ಯೂಸ್ ಪ್ಯಾಕ್ಟರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.

3 ವಲಯಗಳ 11 ಒತ್ತುವರಿ ತೆರವು ಕಾರ್ಯಾಚರಣೆ ಪೂರ್ಣ : ಬಿಬಿಎಂಪಿ

ಸಿಂಗಾಪುರ ಕೆರೆಯಿಂದ ಅಬ್ಬಿಗೆರೆ ಕೆರೆಗೆ ಹರಿಯುವ ಮಳೆ ನೀರುಗಾಲುವೆ(ಕಮಾಂಡೊ ಗ್ಲೋರಿ ಅಪಾರ್ಟ್ಮೆಂಟ್ ಹಿಂಭಾಗ) ಸರ್ವೇ ಸಂ. 97 ಹಾಗೂ 100 ರಲ್ಲಿ 2.4 ಮೀಟರ್ ಅಗಲ ಹಾಗೂ 200 ಮೀಟರ್ ಉದ್ದ ರಾಜಕಾಲುವೆಯ ಒತ್ತುವರಿ ತೆರವುಗೊಳಿಸಲಾಗಿದೆ. ಪಶ್ಚಿಮ ವಲಯ ದಲ್ಲಿ 2 ಒತ್ತುವರಿಗಳನ್ನು ತೆರವುಗೊಳಿಸಿದ್ದು, ಈ ಪೈಕಿ ಶುಭಾಷ್‌ನಗರದ ಬರಗಿ ಮುದ್ದೇನಹಳ್ಳಿಯಲ್ಲಿ 120 ಚ.ಮೀ ಖಾಲಿ ಜಾಗ ಹಾಗೂ 120 ಚ.ಮೀ ರೈಲ್ವೆ ಇಲಾಖೆಯ ಜಾಗ ಸೇರಿದಂತೆ ಒಟ್ಟು 240 ಚ.ಮೀ ನಷ್ಟು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದೆ.

ಮಹದೇವಪುರ ವಲಯದಲ್ಲಿ ಒತ್ತುವರಿ ತೆರವು : ಮಹದೇವಪುರ ವಲಯದಲ್ಲಿ 1 ಒತ್ತುವರಿಯನ್ನು ತೆರವುಗೊಳಿಸಿದ್ದು, ಈ ಪೈಕಿ ಮುನ್ನೇಕೊಳಲು ವ್ಯಾಪ್ತಿಯಲ್ಲಿ ಇಂದು ಖಾಲಿ ಜಾಗವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ. ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ 4 ಒತ್ತುವರಿಗಳನ್ನು ತೆರವುಗೊಳಿಸಿದ್ದು, ಈ ಪೈಕಿ ಹೊರಮಾವು ವಾರ್ಡ್ ಪಟೇಲ್ ರಾಮಯ್ಯ ಲೇಔಟ್‌ನ ಕೊತ್ತನೂರು ಹಳ್ಳಿ ಸರ್ವೇ ಸಂ. 6, 7, 30, 14 ಸೇರಿದಂತೆ ಒಟ್ಟಾರೆ 600 ಮೀ. ಉದ್ದ ಹಾಗೂ 19.5 ಮೀ. ಅಗಲದ ರಾಜಕಾಲುವೆಯ ಒತ್ತುವರಿ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಇಂದು 25 ಮೀಟರ್ ಉದ್ದ ಮತ್ತು 3 ಮೀಟರ್ ಎತ್ತರದ 2 ಕಾಂಪೌಂಡ್ ಗೋಡೆಗಳನ್ನು ಕೆಡವಲಾಗಿದ್ದು, ಒಂದು 10X10 ಅಡಿಯ ತಾತ್ಕಾಲಿಕ ಶೆಡ್ ಹಾಗೂ 20X10 ಅಡಿಯ ಮತ್ತೊಂದು ಶೆಡ್ ಸೇರಿ ಇಂದು 4 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ನಾಳೆ 100 ಮೀಟರ್ ನ ಸ್ಕೇಟಿಂಗ್ ಮೈದಾನ ಸೇರಿದಂತೆ ಉಳಿದ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಹೇಳಿದೆ.

ನಲಪಾಡ್ ಅಕಾಡೆಮಿಯ ಒತ್ತುವರಿ ತೆರವು : ಚೆಲ್ಲಘಟ್ಟದ ಸರ್ವೇ ಸಂ. 70/14 ರಲ್ಲಿರುವ ನಲಪಾಡ್ ಅಕಾಡೆಮಿಯಿಂದ ಒತ್ತುವರಿಯಾಗಿದ್ದ 2.5 ಮೀಟರ್ ಅಗಲ ಹಾಗೂ 150.5 ಮೀಟರ್ ಉದ್ದದ ಕಾಲುವೆ ಜಾಗದಲ್ಲಿ ಅಳವಡಿಸಿದ್ದ ಕಾಂಕ್ರಿಟ್ ಸ್ಲ್ಯಾಬ್ ಅನ್ನು ತೆರವುಗೊಳಿಸಲಾಗಿದೆ. ಈ ಪೈಕಿ ಇಂದಿಗೆ 90 ಮೀಟರ್ ಒತ್ತುವರಿಯನ್ನು ತೆರವುಗೊಳಿಸಿ ತಡೆಗೋಡೆಯ ಮೇಲೆ ಅಳವಡಿಸಿದ್ದ ಫೆನ್ಸಿಂಗ್ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಹೇಳಿದೆ.

ಮಹದೇವಪುರ ವಲಯದ ಪ್ರಮುಖ ತೆರವು ಕಾರ್ಯಾಚರಣೆಗಳು
• ಶಾಂತಿನಿಕೇತನ ಲೇಔಟ್ ನಲ್ಲಿ ಶೇ. 25 ರಷ್ಟು ಬಾಕಿ ಒತ್ತುವರಿಯನ್ನು ಪಾಲಿಕೆ ತೆರವುಗೊಳಿಸಬೇಕಿದೆ.
• ವಾಗ್ದೇವಿ ಲೇಔಟ್ ನಲ್ಲಿ ಶೇ. 25 ರಷ್ಟು ಬಾಕಿ ಒತ್ತುವರಿ ತೆರವುಗೊಳಿಸಬೇಕಿದೆ.
• ಚಲ್ಲಘಟ್ಟ ವ್ಯಾಪ್ತಿಯಲ್ಲಿ ಶೇ. 50 ರಷ್ಟು ಒತ್ತುವರಿ ತೆರವುಗೊಳಿಸಲಾಗಿದೆ.
• ಪಾಪಯ್ಯ ರೆಡ್ಡಿ ಲೇಔಟ್ ನಲ್ಲಿ ಒತ್ತುವರಿ ಮಾಡಿರುವುದನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.
• ಸದರಮಂಗಲ ಕೆರೆಯಿಂದ ಬೆಳ್ಳತ್ತೂರಿನವರೆಗೆ ಒತ್ತುವರಿಯನ್ನು ಗುರುತಿಸಬೇಕಿದೆ.
• ದೊಡ್ಡಕನಹಳ್ಳಿ ಕೆರೆಯಿಂದ ಸೋಲ್ ಕೆರೆವರೆಗೆ ಒತ್ತುವರಿಯನ್ನು ಗುರುತಿಸಬೇಕಿದೆ.
• ಅಪಾರ್ಟ್ಮೆಂಟ್ ನಿಂದ ಶೀಲವಂತ ಕೆರೆವರೆಗೆ ಒತ್ತುವರಿಯನ್ನು ಗುರುತಿಸಬೇಕಿದೆ.
• ಪಟ್ಟಂದೂರು ಅಗ್ರಹಾರ ಕೆರೆಯಿಂದ ನಲ್ಲೂರಹಳ್ಳಿವರೆಗೆ ಒತ್ತುವರಿಯನ್ನು ಗುರುತಿಸಬೇಕಿದೆ.
• ಇದುವರೆಗೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿರುವ ಸ್ಥಳದಲ್ಲಿ ಸಂಗ್ರಹವಾಗಿರುವಂತಹ ಕಟ್ಟಡದ ಭಗ್ನಾವೇಶಷಗಳನ್ನು ತೆರವುಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ.

ಇತರೆಡೆಯ ಕಾರ್ಯಾಚರಣೆಯ ವಿವರ :
• ಭಾಗ್ಮನೆ ಟೆಕ್ ಪಾರ್ಕ್ನಲ್ಲಿ 2.5 ಮೀಟರ್ ಅಗಲದ ರಾಜಕಾಲುವೆಯ ಮೇಲೆ ಕಾಂಕ್ರೀಟ್ ಸ್ಲ್ಯಾಬ್ ಹಾಕಿ ಮುಚ್ಚಿಲಾಗಿದೆ.
• ಪೂರ್ವ ಪಾರ್ಕ್ರಿಡ್ಜ್ ನಲ್ಲಿ 2.5 ಮೀಟರ್ ಅಗಲದ ಸ್ಥಳದಲ್ಲಿ ಕಟ್ಟಡ, ಖಾಲಿ ಜಾಗ ಹಾಗೂ ರಸ್ತೆ ನಿರ್ಮಿಸಲಾಗಿದೆ.
• ಗರುಡಾಚಾರ್ ಪಾಳ್ಯ ಕೆರೆಯಿಂದ ಮಹದೇವಪುರ ಕೆರೆಯ ಭಾಗದಲ್ಲಿ ಸುಮಾರು 13 ಮೀಟರ್ ಅಗಲದ ರಾಜಕಾಲುವೆಯ ಮೇಲೆ ಕಾಂಪೌಂಡ್ ವಾಲ್, ಕಟ್ಟಡ ಹಾಗೂ ಶೆಡ್ ನಿರ್ಮಾಣ ಮಾಡಿರುವುದನ್ನು ಸಮೀಕ್ಷೆ ಮಾಡಿ ಗುರುತಿಸಲಾಗಿದೆ.

ಇದನ್ನೂ ಓದಿ :13 ವಿಐಪಿ ಅಕ್ರಮ ವಿಲ್ಲಾಗಳ ತೆರವು ಕಾರ್ಯ: ಕಂದಾಯ ಇಲಾಖೆ ಆದೇಶಕ್ಕೆ ಕಾಯುತ್ತಿರುವ ಪಾಲಿಕೆ ಅಧಿಕಾರಿಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.