ETV Bharat / state

ಆಂಧ್ರದ ನಗರಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿ ಬಂಧನ: 110 ಕೆಜಿ ಗಾಂಜಾ‌ ವಶ

ಆಂಧ್ರಪ್ರದೇಶದ ತಿರುಪತಿಯಿಂದ ಗಾಂಜಾ ತಂದು ನಗರದಲ್ಲಿ ಸರಬರಾಜು ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ಒಟ್ಟು 110 ಕೆಜಿ ಗಾಂಜಾ, ಬೈಕ್, ₹3 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ..

110 kg of marijuana seized
ಆಂಧ್ರಪ್ರದೇಶದಿಂದ ನಗರಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿ ಬಂಧನ
author img

By

Published : Nov 13, 2020, 5:38 PM IST

Updated : Nov 13, 2020, 9:37 PM IST

ಬೆಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ರಾಜಗೋಪಾಲನಗರ ಪೊಲೀಸರು ಬರೋಬ್ಬರಿ 110 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರದ ಕುರುಬರ ಬೀದಿಯ ಶಿವಕುಮಾರ್ ಬಂಧಿತ ಆರೋಪಿ. ಈತನಿಂದ 17 ಕೆಜಿ ಗಾಂಜಾ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಚಿಕ್ಕಬಳ್ಳಾಪುರ ಮನೆಯಲ್ಲಿ 93 ಕೆಜಿ ಗಾಂಜಾ ಇಟ್ಟಿರುವುದಾಗಿ ಬಾಯ್ಬಿಟ್ಟಿದ್ದ.

ಆಂಧ್ರದ ನಗರಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿ ಬಂಧನ

ಒಟ್ಟು 110 ಕೆಜಿ ಗಾಂಜಾ, ಬೈಕ್, ₹3 ಸಾವಿರ ನಗದು ವಶಪಡಿಸಿಕೊಂಡಿರುವುದಾಗಿ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.

ಆರೋಪಿಯು ವೃತ್ತಿಯಲ್ಲಿ ಟ್ರಕ್ ಚಾಲಕನಾಗಿದ್ದು, ಈತನು ತರಕಾರಿ ಲೋಡ್ ಅನ್ನು ತೆಗೆದುಕೊಂಡು ಹೈದರಾಬಾದ್, ತಿರುಪತಿ, ವಿಜಯವಾಡ, ವಿಶಾಖಪಟ್ಟಣಗಳಿಗೆ ಹೋಗಿ ಬರುತ್ತಿದ್ದ.

ಆರೋಪಿಯು ಆಂಧ್ರಪ್ರದೇಶದ ತಿರುಪತಿಯಲ್ಲಿ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಗಾಂಜಾ ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದುದ್ದಾಗಿ ಬಾಯ್ಬಿಟ್ಟಿದ್ದಾನೆ.

ಅಲ್ಲದೇ ಇದರಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರಾ ಎಂಬ ಮಾಹಿತಿ ಪತ್ತೆ ಹಚ್ಚುವ ಸಲುವಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ತಿಳಿಸಿದರು.

Last Updated : Nov 13, 2020, 9:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.