ಬೆಂಗಳೂರು: ರಾಜ್ಯದಲ್ಲಿಂದು 1,152 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,08,275 ಕ್ಕೆ ಏರಿಕೆ ಆಗಿದೆ.
ಕೋವಿಡ್ಗೆ 15 ಸೋಂಕಿತರು ಮೃತರಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 12,004 ಕ್ಕೆ ಏರಿಕೆ ಆಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ 1.00 ರಷ್ಟು ಹಾಗೂ ಸಾವಿನ ಪ್ರಮಾಣ ಶೇ 1.30 ರಷ್ಟು ಇದೆ.
ಕೊರೊನಾದಿಂದ 2,147 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 8,81,882 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. 223 ಸೋಂಕಿತರು ತೀವ್ರ ನಿಗಾಘಟಕದಲ್ಲಿ ಇದ್ದು, ರಾಜ್ಯದಲ್ಲಿ ಸದ್ಯ 14,370 ಸಕ್ರಿಯ ಪ್ರಕರಣಗಳು ಇವೆ.
ಕಳೆದ 7 ದಿನಗಳಲ್ಲಿ 25,184 ಜನರು ಹೋಂ ಕ್ವಾರೆಂಟೈನ್ನಲ್ಲಿ ಇದ್ದಾರೆ. ಇನ್ನು ಸೋಂಕಿತರ ಸಂಪರ್ಕದಲ್ಲಿ ಪ್ರಾಥಮಿಕ 80,972. ದ್ವಿತೀಯ 90,135 ಜನರು ಇದ್ದಾರೆ.