ಬೆಂಗಳೂರು: ರಾಜ್ಯ ಸರ್ಕಾರ ನಿಗಮ ಮಂಡಳಿ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿದ ಬೆನ್ನಲ್ಲೇ ಇದೀಗ 12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ನಾಮ ನಿರ್ದೇಶನವನ್ನು ರದ್ದುಪಡಿಸಿ ಆದೇಶಿಸಿದೆ.
ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಶಿವಕುಮಾರ್ ಸಂಗೂರ, ಕೆ.ಜಿ.ಎಫ್ ನಗರಾಭಿವೃದ್ಧಿ ಪ್ರಾಧಿಕಾರದ ಅಶ್ವಿನಿ, ಹುಬ್ಬಳ್ಳಿ - ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ನಾಗೇಶ್ ಪುಂಡಲೀಕ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಶೋಕ ಜೀರೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ರವಿಶಂಕರ ಮಿಜಾರ್ ಜನ್ ಕೇಶವ ಮಿಜಾರ್, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆನಂದ ಚಿನ್ ಚಿನ್ನತಂಬಿ, ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಲಲಾಟಮೂರ್ತಿ ಬಿನ್ ಸಿದ್ದಪ್ಪರ ನಾಮನಿರ್ದೇಶನ ರದ್ದುಪಡಿಸಲಾಗಿದೆ.
ಚಾಮರಾಜನಗರ ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಪಿ.ಬಿ.ಶಾಂತಮೂರ್ತಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹೆಚ್.ವಿ.ರಾಜೀವ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ರಮೇಶ್ ಹೊಳ್ಕ, ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಬಸವಲಿಂಗಪ್ಪ ಕಾಶಿನಾಥ್ ನಾವಲಗಿ ಮತ್ತು ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ದಯಾಘನ್ ಪ್ರಹ್ಲಾದ್ ರಾವ್ ನಾಮನಿರ್ದೇಶನವೂ ರದ್ದಾಗಿದೆ.
ಇದನ್ನೂ ಓದಿ: ದ್ರೌಪದಿ ಮುರ್ಮು VS ಯಶವಂತ್ ಸಿನ್ಹಾ: ರಾಷ್ಟ್ರಪತಿ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ