ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚು ಜನರಿಗೆ ಹರಡುತ್ತಿದ್ದು, ರಾಜ್ಯದಲ್ಲಿ ಇಂದು ಕೂಡ 120 ಹೊಸ ಕೋವಿಡ್ ಪ್ರಕರಣ ಕಾಣಿಸಿಕೊಂಡಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6041ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 42 ಹೊಸ ಪ್ರಕರಣ ಕಾಣಿಸಿಕೊಂಡಿದ್ದು, ಯಾದಗಿರಿಯಲ್ಲಿ 27, ಕಲಬುರಗಿಯಲ್ಲಿ 11 ಕೇಸ್, ಬಳ್ಳಾರಿಯಲ್ಲಿ 20, ಯಾದಗಿರಿಯಲ್ಲಿ 27, ವಿಜಯಪುರದಲ್ಲಿ 13 ಹಾಗೂ ಬೀದರ್ನಲ್ಲಿ 05 ಪ್ರಕರಣ ಕಾಣಿಸಿಕೊಂಡಿವೆ. ಉಳಿದಂತೆ ಬೆಂಗಳೂರಿನಲ್ಲಿ ಇಬ್ಬರು ಹಾಗೂ ಧಾರವಾಡದಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಇನ್ನು ಉಡುಪಿಯಲ್ಲಿ ಇಂದು ಕೂಡ ಯಾವುದೇ ಹೊಸ ಪ್ರಕರಣ ಕಾಣಿಸಿಕೊಂಡಿಲ್ಲ. ರಾಜ್ಯದಲ್ಲಿ ಒಟ್ಟು 257 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಸದ್ಯ 3108 ಸಕ್ರಿಯ ಪ್ರಕರಣಗಳಿದ್ದು, 2862 ಜನರು ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.