ಬೆಂಗಳೂರು: ರಾಜ್ಯದಲ್ಲಿಂದು 1,222 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,07,123ಕ್ಕೆ ಏರಿಕೆ ಆಗಿದೆ.
ಕೋವಿಡ್ಗೆ ಇಂದು 8 ಸೋಂಕಿತರು ಮೃತರಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 11,989ಕ್ಕೆ ಏರಿಕೆ ಆಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ 1.16ರಷ್ಟು ಹಾಗೂ ಸಾವಿನ ಪ್ರಮಾಣ ಶೇ. 0.65ರಷ್ಟಿದೆ.
ಓದಿ: ವಿನಯ್ ಜಾಮೀನು ಅರ್ಜಿ ವಿಚಾರಣೆ: ಸಿಬಿಐ ತಕರಾರು ಅರ್ಜಿ ಸಲ್ಲಿಸಲು ಕಾಲಾವಕಾಶ
ಕೊರೊನಾದಿಂದ 1039 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 8,79,735 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 223 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಇದ್ದು, ರಾಜ್ಯದಲ್ಲಿ ಸದ್ಯ 15,380 ಸಕ್ರಿಯ ಪ್ರಕರಣಗಳು ಇವೆ. ಕಳೆದ 7 ದಿನಗಳಲ್ಲಿ 24,732 ಜನರು ಹೋಂ ಕ್ವಾರಂಟೈನ್ನಲ್ಲಿ ಇದ್ದಾರೆ. ಇನ್ನು ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 82,106, ದ್ವಿತೀಯ ಸಂಪರ್ಕದಲ್ಲಿ 91,274 ಜನರು ಇದ್ದಾರೆ.
ಬೆಂಗಳೂರಲ್ಲಿಂದು 687 ಕೋವಿಡ್ ಪಾಸಿಟಿವ್: 4 ಮಂದಿ ಬಲಿ
ನಗರದಲ್ಲಿಂದು 687 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, 4 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಒಟ್ಟು ಸಂಖ್ಯೆ 381623ಕ್ಕೆ ಏರಿಕೆಯಾಗಿದೆ. ಇಂದು 443 ಮಂದಿ ಬಿಡುಗಡೆಗೊಂಡಿದ್ದಾರೆ. ಈವರೆಗೆ ಒಟ್ಟು 3,66,888 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ 10478 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ನಾಲ್ಕು ಮಂದಿ ಮೃತಪಟ್ಟಿದ್ದು, ಕೋವಿಡ್ ಸೋಂಕಿನಿಂದ ಈವರೆಗೆ 4,256 ಮಂದಿ ಅಸುನೀಗಿದ್ದಾರೆ.