ETV Bharat / state

ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್ ಮೂಲಕ 12,300 ಕೋರ್ಸ್​​ಗಳು ಉಚಿತ.. ರಾಜ್ಯದ 24 ವಿವಿಗಳೊಂದಿಗೆ ಒಡಂಬಡಿಕೆ - ಈಟಿವಿ ಭಾರತ ಕನ್ನಡ

ಆಧುನಿಕ ತಂತ್ರಜ್ಞಾನದ ನೆರವಿನಿಂದ ರೂಪಿಸಿರುವ ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್ ವ್ಯವಸ್ಥೆಯಡಿ 12,300 ಕೋರ್ಸ್​ಗಳು ಉಚಿತವಾಗಿ ಲಭ್ಯವಿವೆ. 6ನೇ ತರಗತಿಯಿಂದ ಪಿಹೆಚ್​ಡಿಯವರೆಗೆ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಈ ಕೋರ್ಸ್​ಗಳನ್ನು ಆನ್​ಲೈನ್​ನಲ್ಲಿ ಕಲಿಯಬಹುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ತಿಳಿಸಿದರು.

12300-free-courses-available-through-infosys-springboard
ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್ ಮೂಲಕ 12,300 ಕೋಸ್​ಗಳು ಉಚಿತ ಲಭ್ಯ: ರಾಜ್ಯದ 24 ವಿವಿಗಳೊಂದಿಗೆ ಒಡಂಬಡಿಕೆ
author img

By

Published : Sep 6, 2022, 4:01 PM IST

ಬೆಂಗಳೂರು: ವಿದ್ಯಾರ್ಥಿಗಳನ್ನು ವೃತ್ತಿ ಮತ್ತು ಬದುಕಿಗೆ ಸಜ್ಜುಗೊಳಿಸುವ ಉದ್ದೇಶದೊಂದಿಗೆ ರಾಜ್ಯ ಉನ್ನತ ಶಿಕ್ಷಣ ಪರಿಷತ್, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ರಾಜ್ಯದ ಎಲ್ಲ ವಿವಿಗಳು, ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆ ಜೊತೆ ಮಂಗಳವಾರ ಒಡಂಬಡಿಕೆಗೆ ಅಂಕಿತ ಹಾಕಿದವು.

ವಿಧಾನಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಸಮ್ಮುಖದಲ್ಲಿ ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಶಿ ಮತ್ತು ಇನ್ಫೋಸಿಸ್‌ನ ತಿರುಮಲ ಆರೋಹಿ ಒಡಂಬಡಿಕೆ ವಿನಿಮಯ ಮಾಡಿಕೊಂಡರು. ಉಳಿದಂತೆ ಬೆಂಗಳೂರು, ಮಂಗಳೂರು, ಮೈಸೂರು, ಕರ್ನಾಟಕ, ತುಮಕೂರು, ಗುಲಬರ್ಗಾ, ಕುವೆಂಪು, ಸಂಗೀತ, ಜಾನಪದ ಸೇರಿದಂತೆ ಎಲ್ಲ 24 ವಿವಿಗಳ ಕುಲಪತಿಗಳು ಹಾಜರಿದ್ದು, ಒಡಂಬಡಿಕೆ ಹಸ್ತಾಂತರಿಸಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಅಶ್ವತ್ಥನಾರಾಯಣ, ಇನ್ಫೋಸಿಸ್ ಸಂಸ್ಥೆಯು ಸಮಾಜದ ಒಳಿತಿಗಾಗಿ ತನ್ನ ಜ್ಞಾನ ಪರಿಣತಿಯನ್ನು ಹಂಚಿಕೊಳ್ಳಲು ಮುಂದೆ ಬಂದಿದೆ. ಆಧುನಿಕ ತಂತ್ರಜ್ಞಾನದ ನೆರವಿನಿಂದ ಅದು ರೂಪಿಸಿರುವ ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್ (https://infyspringboard.onwingspan.com) ವ್ಯವಸ್ಥೆಯಡಿ 12,300 ಕೋರ್ಸುಗಳು ಉಚಿತವಾಗಿ ಲಭ್ಯವಿವೆ ಎಂದರು.

6ನೇ ತರಗತಿಯಿಂದ ಪಿಹೆಚ್​ಡಿಯವರೆಗೆ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಈ ಕೋರ್ಸ್​ಗಳನ್ನು ಆನ್​ಲೈನ್​ನಲ್ಲಿ ಕಲಿಯಬಹುದು. ಜೊತೆಗೆ ಅದು 800ಕ್ಕೂ ಹೆಚ್ಚು ಶಿಕ್ಷಣ ಪರಿಣತರ ನೆರವನ್ನು ಉನ್ನತ ಶಿಕ್ಷಣ ಕಲಿಯುತ್ತಿರುವ ವಿದ್ಯಾರ್ಥಿಗಳು ಮತ್ತು ಬೋಧಕ ವೃಂದಕ್ಕೆ ನೀಡಲಿದೆ. ಇದರ ಸಲುವಾಗಿ ಇನ್ಫೋಸಿಸ್ ಸುಮಾರು ನೂರು ಕೋಟಿ ಖರ್ಚು‌ ಮಾಡುತ್ತಿದೆ ಎಂದು ಹೇಳಿದರು.

ಈ ಒಡಂಬಡಿಕೆಯಿಂದಾಗಿ ನಮ್ಮ ವಿವಿಗಳು ಸ್ಪ್ರಿಂಗ್‌ಬೋರ್ಡ್ ವೇದಿಕೆಯಲ್ಲಿರುವ ಕೋರ್ಸುಗಳನ್ನು ಪರಿಣಮಕಾರಿಯಾಗಿ ಬಳಸಿಕೊಳ್ಳಲು ಅವಕಾಶ ಸಿಗಲಿದೆ. ಈ ಮೂಲಕ ವಿವಿಗಳು ತಮ್ಮ ಪಠ್ಯಕ್ರಮಗಳನ್ನು ಪ್ರಸ್ತುತಗೊಳಿಸಿಕೊಳ್ಳಬೇಕು. ಬಳಿಕ ಇವುಗಳ ಮೂಲಕ ಬೋಧಕರಿಗೆ ಹಲವು ಉಪಯುಕ್ತ ಬೋಧನಾ ತಂತ್ರಗಳನ್ನು ಕಲಿಸಬೇಕು. ಜೊತೆಗೆ ಇಲ್ಲಿರುವ ಪರಿಣತರನ್ನು ಕಾಲೇಜುಗಳು ಮತ್ತು ವಿವಿಗಳು ತಮ್ಮ ಅಧ್ಯಯನ ಮಂಡಲಿಯಲ್ಲಿ ಸೇರಿಸಿಕೊಳ್ಳಬೇಕೆಂದು ತಿಳಿಸಿದರು.

ಅಂತಾರಾಷ್ಟ್ರೀಕರಣ ಪ್ರಕ್ರಿಯೆ: ಜಾಗತಿಕ ಗುಣಮಟ್ಟದ ಶಿಕ್ಷಣ ಇಂದಿನ ತುರ್ತುಗಳಲ್ಲಿ ಒಂದಾಗಿದೆ. ಸರ್ಕಾರ ಉನ್ನತ ಶಿಕ್ಷಣ ವಲಯವನ್ನು ಅಂತಾರಾಷ್ಟ್ರೀಕರಣ ಪ್ರಕ್ರಿಯೆಗೆ ತೆರೆದಿದ್ದು, ಜಗತ್ತಿನ ಅತ್ಯುತ್ತಮ ಸಂಸ್ಥೆಗಳು ಮತ್ತು ಉದ್ಯಮಗಳೊಂದಿಗೆ ಒಡಂಬಡಿಕೆಗಳನ್ನು ಮಾಡಿಕೊಳ್ಳುತ್ತಿದೆ. ಈಗಾಗಲೇ ನಾಸ್ಕಾಂ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ ಸಂಸ್ಥೆಗಳೊಂದಿಗೆ ಇಂತಹ ಉಪಕ್ರಮ ಆರಂಭಿಸಲಾಗಿದ್ದು, ಆಧುನಿಕ ಕೋರ್ಸ್​ಗಳನ್ನು ಕಲಿಕೆಯಲ್ಲಿ ಕಡ್ಡಾಯಗೊಳಿಸಲಾಗಿದೆ. ಇನ್ಫೋಸಿಸ್ ಜೊತೆಗಿನ ಈ ಒಡಂಬಡಿಕೆ ಮೈಲಿಗಲ್ಲಾಗಿದೆ ಎಂದರು.

ಇನ್ಫೋಸಿಸ್‌ ಸಂಸ್ಥೆಯ ಶಿಕ್ಷಣ ಮತ್ತು ತರಬೇತಿ ವಿಭಾಗದ ಮುಖ್ಯಸ್ಥ ತಿರುಮಲ ಆರೋಹಿ ಮಾತನಾಡಿ, ಸ್ಪ್ರಿಂಗ್‌ಬೋರ್ಡ್ ಮೂಲಕ ಬೋಧಕರ ಅಗತ್ಯಗಳನ್ನು ಮನಗಂಡು, ಸೂಕ್ತ ತರಬೇತಿ ಕೊಡಲಾಗುವುದು ಇದಕ್ಕಾಗಿ ವಾರ್ಷಿಕ ಯೋಜನೆಯನ್ನು ರೂಪಿಸಲಾಗುವುದು. ಈ ಮೂಲಕ ವಿವಿಗಳು ಮತ್ತು ಅಧೀನ ಕಾಲೇಜುಗಳ ಬೋಧಕರನ್ನು ಜಾಗತಿಕ ಅಗತ್ಯಕ್ಕೆ ತಕ್ಕಂತೆ ಸಜ್ಜುಗೊಳಿಸಲಾಗುವುದು. ನಿಗದಿತವಾಗಿ ಇದರ ಪ್ರಗತಿಯ ಪರಾಮರ್ಶೆಯೂ ನಡೆಯಲಿದೆ ಎಂದರು.

2025ರ ವೇಳೆಗೆ ಒಂದು ಕೋಟಿ ಯುವಜನರಿಗೆ ಡಿಜಿಟಲ್ ಮತ್ತು ಜೀವನ ಕೌಶಲ್ಯಗಳನ್ನು ಕಲಿಸುವುದು ಇನ್ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ನ ಗುರಿಯಾಗಿದೆ. ಇದರಲ್ಲಿ 10ರಿಂದ 22 ವರ್ಷದೊಳಗಿನ ಯುವಜನರತ್ತ ಗಮನವನ್ನು ಕೇಂದ್ರೀಕರಿಸಿದ್ದೇವೆ. ಇದು ಭಾರತೀಯ ಭಾಷೆಗಳಲ್ಲೂ ಲಭ್ಯವಿದ್ದು, ಈಗಾಗಲೇ 23 ಲಕ್ಷ ವಿದ್ಯಾರ್ಥಿಗಳು ದೇಶಾದ್ಯಂತ ಸ್ಪ್ರಿಂಗ್‌ಬೋರ್ಡ್ ವೇದಿಕೆಯಲ್ಲಿ ಕಲಿಯುತ್ತಿದ್ದಾರೆ ಎಂದು ಅವರು ತಿಳಿಸಿದರು.

ಸ್ಪ್ರಿಂಗ್‌ಬೋರ್ಡ್ ಕೋರ್ಸ್‌ಗಳು: ಇನ್ಫೋಸಿಸ್‌ ಸ್ಪ್ರಿಂಗ್‌ಬೋರ್ಡ್ ವೇದಿಕೆಯ ಮೂಲಕ ವಿದ್ಯಾರ್ಥಿಗಳು ಉಚಿತವಾಗಿ ಜಾವಾ, ಪೈಥಾನ್, ಸಿ# ಮುಂತಾದ ಪ್ರೋಗ್ರಾಮಿಂಗ್ ಲ್ಯಾಂಗ್ವೇಜ್‌ಗಳು, ಬ್ಯಾಂಕಿಂಗ್, ಸ್ಪೇಸ್‌ ನೆಟ್‌ವರ್ಕ್, ರೀಟೇಲ್ ಟೆಲಿಕಾಂ, ಉದ್ಯಮಗಳಿಗೆ ಬೇಕಾದ ಮೂಲಭೂತ ಕೌಶಲ್ಯಗಳು ಮುಂತಾದವನ್ನು ಕಲಿಯಲು ಅವಕಾಶವಿದೆ.

ಇದಲ್ಲದೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಬಿಗ್‌ ಡೇಟಾ, ಅನಲಿಟಿಕ್ಸ್, ಬ್ಲಾಕ್‌ ಚೈನ್‌, ಎಪಿಐ ಎಕಾನಮಿ, ಕೋಡಿಂಗ್, ಕ್ಲೌಡ್‌ ತಂತ್ರಜ್ಞಾನ, ಸೈಬರ್ ಸೆಕ್ಯುರಿಟಿ, ಡಿಸೈನ್ ಥಿಂಕಿಂಗ್, ಡೇಟಾ ವಿಶುಯಲೈಸೇಷನ್, ಎಡ್ಜ್‌ ಕಂಪ್ಯೂಟಿಂಗ್, ಡೇಟಾ ಪ್ರೈವೆಸಿ ಮತ್ತು ಸೆಕ್ಯುರಿಟಿ (ಇ-ಸುರಕ್ಷತೆ) ಕುರಿತು ಕಲಿಯಬಹುದು. ಇದಕ್ಕೆ ಸಂಬಂಧಿಸಿದಂತೆ ಇನ್ಫೋಸಿಸ್‌ ಕೂಡ ಕೋರ್ಸೆರಾ, ಸ್ಕಿಲ್‌ಸಾಫ್ಟ್‌, ಐಐಎಚ್‌ಟಿ, ಲರ್ನ್‌ಶಿಪ್‌ ಮುಂತಾದ ಸಂಸ್ಥೆಗಳೊಂದಿಗೆ ಸಹಭಾಗಿತ್ವ ಹೊಂದಿದೆ.

ಹಲವು ಸಂಸ್ಥೆಗಳ ಸಕ್ರಿಯ ಪಾತ್ರ: ಒಡಂಬಡಿಕೆಗೆ ಸರಕಾರದ ಪರವಾಗಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ವಿಟಿಯು, ರಾಜ್ಯದ ವಿವಿಗಳು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ, ಬೇಸ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿವಿಗಳು ಸಹಿ ಹಾಕಿದವು. ಇನ್ಫೋಸಿಸ್ ಪರವಾಗಿ ಕಾರ್ಪೊರೇಟ್‌ ವ್ಯವಹಾರಗಳ ಮುಖ್ಯಸ್ಥ ಸಂತೋಷ್ ಅನಂತಪುರ, ಸ್ಪ್ರಿಂಗ್‌ಬೋರ್ಡ್ ವಿಭಾಗದ ಮುಖ್ಯಸ್ಥ ವಿಕ್ಟರ್ ಸುಂದರರಾಜ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗ ರಚನೆ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.