ಬೆಂಗಳೂರು: ರಾಜ್ಯದಲ್ಲಿಂದು 1336 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,64,140ಕ್ಕೆ ಏರಿಕೆಯಾಗಿದೆ.
ಕೊರೊನಾಗೆ 16 ಸೋಂಕಿತರು ಮೃತರಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 11,557ಕ್ಕೆ ಏರಿಕೆ ಆಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ. 1.77ರಷ್ಟಿದ್ದು, ಸಾವಿನ ಪ್ರಮಾಣ ಶೇ. 1.19ರಷ್ಟು ಇದೆ.
ಕೊರೊನಾದಿಂದ 2100 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 8,27,241 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. 693 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಇದ್ದು, ರಾಜ್ಯದಲ್ಲಿ ಸದ್ಯ 25,323 ಸಕ್ರಿಯ ಪ್ರಕರಣಗಳಿವೆ. ಕಳೆದ 7 ದಿನಗಳಲ್ಲಿ 32,950 ಜನರು ಹೋಂ ಕ್ವಾರಂಟೈನ್ನಲ್ಲಿ ಇದ್ದಾರೆ.