ETV Bharat / state

ಬೆಂಗಳೂರು ಗಲಭೆ ಪ್ರಕರಣ: ನವೀನ್​ಗೆ 14 ದಿನ ನ್ಯಾಯಾಂಗ ಬಂಧನ - ಬೆಂಗಳೂರು ಗಲಭೆ

ಬೆಂಗಳೂರಿನ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಆರೋಪಿ ನವೀನ್​​ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್​​ ಆದೇಶ ಹೊರಡಿಸಿದೆ.

banglore
ಬೆಂಗಳೂರು
author img

By

Published : Aug 17, 2020, 3:50 PM IST

Updated : Aug 17, 2020, 3:56 PM IST

ಬೆಂಗಳೂರು: ನಗರದ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಬಂಧಿತನಾಗಿದ್ದ ಆರೋಪಿ ನವೀನ್​​ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

11ನೇ ಎಸಿಎಂಎಂ ನ್ಯಾಯಾಲಯವು ಈ ಆದೇಶ ಹೊರಡಿಸಿದೆ. ಸಾಮಾಜಿಕ ಜಾಲತಾಣ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ​ ಹಿನ್ನೆಲೆ ನವೀನ್​ನನ್ನು ಬಂಧಿಸಲಾಗಿತ್ತು.

ವಸಂತನಗರದ ಗುರುನಾನಕ್ ಭವನದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಪೊಲೀಸರು 11ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರುಪಡಿಸಿದ್ದರು. ಸದ್ಯ ವಿಚಾರಣೆ ಮುಗಿದಿರುವ ಕಾರಣ ಪೊಲೀಸರು ಪುನಃ ಕಸ್ಟಡಿಗೆ ಕೇಳದೆ ಇರುವ ಹಿನ್ನೆಲೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್​ ಆದೇಶಿಸಿದೆ. ಒಂದು ವೇಳೆ ಇನ್ನಷ್ಟು ತನಿಖೆಯ ಅಗತ್ಯ ಇದ್ದರೆ ಮತ್ತೆ ಪೊಲೀಸರು ವಶಕ್ಕೆ ಪಡೆಯುವ ಸಾದ್ಯತೆ ಇದೆ.

Last Updated : Aug 17, 2020, 3:56 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.